ಕಸಾಪ ದತ್ತಿ ಪ್ರಶಸ್ತಿಗಳಿಗೆ ಪುಸ್ತಕ ಆಹ್ವಾನ

Kasapa
Published on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2023ನೇ ಸಾಲಿನ 53 ನಾನಾ ಪುಸ್ತಕ ದತ್ತಿ ಪ್ರಶಸ್ತಿಗಳಿಗೆ 57 ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಿದೆ.

ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳುಹಿಸಬಹುದು ಎಂದು ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ. ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಕಳುಹಿಸಲಬೇಕು. ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದಿರಬೇಕು.

ವಿಳಾಸ: ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು- 18. ವೆಬ್‌ಸೈಟ್: https://kannadasahithyaparishattu.in, www.kasapa.in ದೂ: 080- 2661 2991, 2662 3584.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net