ತಾಳಿಕೋಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯದಲ್ಲಿ ೧೧೨ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾಯಕ್ರಮದಲ್ಲಿ ಹಿರಿಯ ಸಾಹಿತಿ ಸಿದ್ದಣ್ಣ ದೇಸಾಯಿ ಅವರನ್ನು ಸನ್ಮಾನಿಸಲಾಯಿತು.
Published on:
Copied
Follow Us
ವಿಜಯವಾಣಿ ಸುದ್ದಿಜಾಲ, ತಾಳಿಕೋಟೆ
ಕನ್ನಡ ಸಾಹಿತ್ಯ ಪರಿಷತ್ತು ನಾಡು-ನುಡಿ, ನೆಲ-ಜಲ ಹಾಗೂ ಸಂಸ್ಕೃತಿ ಸಂಸ್ಕಾರ ಉಳಿಸುವ ಹಾಗೂ ಬೆಳೆಸುವ ಕಾರ್ಯ ನಿರಂತರವಾಗಿ ಪ್ರಾತಿನಿಧಿಕ ಸಂಸ್ಥೆಯಾಗಿ ಕಸಾಪ ತನ್ನ ಕರ್ತವ್ಯ ಪಾಲಿಸುತ್ತಿದೆ ಎಂದು ಹಿರಿಯ ಸಾಹಿತಿ ಹಾಗೂ ವಿಶ್ರಾಂತ ಲೆಕ್ಕ ಪರಿಶೋಧಕ ಸಿದ್ದಣ್ಣ ದೇಸಾಯಿ ಹೇಳಿದರು.
ಪಟ್ಟಣದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯದಲ್ಲಿ ೧೧೨ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನ ಆಚರಣೆಯಲ್ಲಿ ಅವರು ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ೧೯೧೫ರಲ್ಲಿ ಸ್ಥಾಪನೆ ಮಾಡಿದ ಸರ್ಕಾರದ ಪ್ರಾತಿನಿಧಿಕ ಸಂಸ್ಥೆ ಕಸಾಪ ಇಂದು ಹೆಮ್ಮರವಾಗಿ ಬೆಳೆದು ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆ ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದರು.
ರೇವಣಸಿದ್ದಪ್ಪ ಕೊಪ್ಪದ ಮಾತನಾಡಿ, ಕಸಾಪ ಅನೇಕ ವಿಷಯಗಳ ಕುರಿತು ಉಪನ್ಯಾಸ, ಚಿಂತನ, ಗೋಷ್ಠಿ, ಕವನ ವಾಚನ, ರಂಗಭೂಮಿ ಕಲೆ ಇತರೆ ವಿಷಯಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಮಾಡುವುದರ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರವನ್ನು ವಿಸ್ತರಿಸಿದ ಕೀರ್ತಿ ಕಸಾಪಕ್ಕೆ ಸಲ್ಲುತ್ತದೆ ಎಂದು ಹೇಳಿದರು.
ಗೌರವ ಕೋಶಾಧ್ಯಕ್ಷ ರಾಜು ಹಂಚಾಟೆ ಹಾಗೂ ಬಿ.ಆರ್. ಪೊಲೀಸ್ ಪಾಟೀಲ ಮಾತನಾಡಿ, ಕಸಾಪ ಕನ್ನಡಿಗರ ಹೆಮ್ಮೆಯ ಸಂಸ್ಥೆ. ಆಡಳಿತ ಭಾಷೆ. ಮಾತೃಭಾಷೆ ಕನ್ನಡವಾಗಿದ್ದು ಎಲ್ಲರೂ ಕಡ್ಡಾಯವಾಗಿ ಕನ್ನಡ ಕಲಿಯಬೇಕು ಎಂದರು.