ರಾಜ್ಯಪಾಲರನ್ನು ಭೇಟಿ ಮಾಡಿದ ಕಾಶ್ಮೀರ ಕಣಿವೆ ವಿದ್ಯಾರ್ಥಿಗಳು

rajabhavan
Published on

ಬೆಂಗಳೂರು: ಕೇಂದ್ರ ಸರ್ಕಾರವು ಪ್ರಾರಂಭಿಸಿರುವ ಭಾರತ ದರ್ಶನ ಅಧ್ಯಯನ ಪ್ರವಾಸ ಕಾರ್ಯಕ್ರಮದ ಭಾಗವಾಗಿ ಕರ್ನಾಟಕಕ್ಕೆ ಆಗಮಿಸಿರುವ ಕಾಶ್ಮೀರ ಕಣಿವೆಯ 30 ವಿದ್ಯಾರ್ಥಿಗಳು ರಾಜಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದರು.

ಭಾರತದ ವೈವಿಧ್ಯಮಯ ಸಂಸ್ಕೃತಿಗಳನ್ನು ಅನ್ವೇಷಿಸಲು, ಪ್ರಮುಖ ನಾಯಕರನ್ನು ಭೇಟಿ ಮಾಡಿ ಅನುಭವದ ತಿಳಿಯಲು, ಮಾಹಿತಿ ಪಡೆಯಲು ಮತ್ತು ದೇಶದ ಪರಂಪರೆ ಮತ್ತು ಅಭಿವೃದ್ಧಿಯ ಬಗ್ಗೆ ವಿಶಾಲ ದೃಷ್ಟಿಕೋನಗಳನ್ನು ಪಡೆಯಲು ಈ ಯೋಜನೆ ಅನುವು ಮಾಡಿಕೊಡುತ್ತದೆ.

ಕಾಶ್ಮೀರದ ಯುವ ವಿದ್ಯಾರ್ಥಿಗಳು ಪ್ರಸ್ತುತ ಪ್ರವಾಸದಲ್ಲಿದ್ದು, ಶುಕ್ರವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಸಂವಹನ ನಡೆಸಿದರು. ಈ ವೇಳೆ ಕಾಶ್ಮೀರ ಕಣಿವೆ ಎಸ್‌ಎಸ್‌ಬಿ ಅಸಿಸ್ಟೆಂಟ್ ಕಮಾಂಡೆಂಟ್ ಅಂಕಿತ್ ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net