

ಮೈಸೂರು: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಗೆ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂ.ವಿ.ಎ)(ಎರಡು ಶೈಕ್ಷಣಿಕ ವರ್ಷದ ನಾಲ್ಕು ಸೆಮಿಸ್ಟರ್ ಸಿ.ಬಿ.ಸಿ.ಎಸ್ ಪದ್ದತಿ) ದೃಶ್ಯ ಕಲೆಯಲ್ಲಿ 2024-25 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.
ಪ್ರಥಮ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂ.ವಿ.ಎ) ಪ್ರವೇಶಾತಿಗಾಗಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಕ್ಕೆ ಅರ್ಜಿ ಸಲ್ಲಿಸಲು ರೂ.250 ಪಾವತಿಸಿ ಕಛೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 10 ರೊಳಗೆ ಕಛೇರಿಗೆ ಸಲ್ಲಿಸಬಹುದು.
ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು http://www.mysore.nic.in ಅಥವಾ http://www.cavamysore.karnataka.gov.in ಅಂತರ್ಜಾಲದ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ದೂ.ಸಂ.0821-2438931 ಯನ್ನು ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.