ಕಾವೇರಿ ನದಿ ನೀರು ವಿವಾದ: ನಾಳೆ ಮಹತ್ವದ ಬೆಳವಣಿಗೆ?

Kaveri (1)
Published on

ನವದೆಹಲಿ: ತಮಿಳುನಾಡಿಗೆ ದಿನಕ್ಕೆ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿರುವುದನ್ನು ಕರ್ನಾಟಕ ಸರ್ಕಾರ ಪ್ರಶ್ನಿಸಿರುವ ಹಿನ್ನೆಲೆಯಲ್ಲಿ ನಾಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನವದೆಹಲಿಯಲ್ಲಿ ಸಭೆ ನಡೆಸಲಿದೆ. ಹೀಗಾಗಿ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಮಹತ್ವದ ಬೆಳವಣಿಗೆಯೊಂದು ನಡೆಯುವ ಸಾಧ್ಯತೆ ಗೋಚರಿಸಿದೆ.

ರಾಜ್ಯದ ನಾಲ್ಕೂ ಕಾವೇರಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ತೀವ್ರವಾಗಿ ಕುಸಿದಿದ್ದು, ಈ ಸಂದರ್ಭದಲ್ಲಿ ನೀರು ಬಿಡುಗಡೆ ಸಾಧ್ಯ ಇಲ್ಲ ಎಂದಿದ್ದ ಕರ್ನಾಟಕ, ನಿಯಂತ್ರಣ ಸಮಿತಿ ಶಿಫಾರಸುಗಳನ್ನು ಮರುಪರಿಶೀಲಿಸಬೇಕು ಎಂದು ಕಾವೇರಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿತ್ತು. ಜತೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೂ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು.

ಏತನ್ಮಧ್ಯೆ, ಕರ್ನಾಟಕ ನೀರು ಹರಿಸುತ್ತಿಲ್ಲ ಎನ್ನುವುದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ತಮಿಳುನಾಡು ನಿರ್ಧರಿಸಿದೆ. ನಾಳೆಯಿಂದಲೇ ಸಂಸತ್ತಿನ ವಿಶೇಷ ಅಧಿವೇಶನ ಶುರುವಾಗುತ್ತಿದ್ದು, ರಾಜ್ಯದ ಸರ್ವಪಕ್ಷಗಳ ನಿಯೋಗ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ನೇತೃತ್ವದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲಿದೆ. ಸೂಕ್ತ ಪ್ರಮಾಣದಲ್ಲಿ ನೀರು ಬಿಡುಗಡೆಗೆ ಕರ್ನಾಟಕಕ್ಕೆ ಸೂಚನೆ ನೀಡಬೇಕು ಎಂದು ತಮಿಳುನಾಡು ಒತ್ತಾಯಿಸಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net