ಕೆಸಿ ವ್ಯಾಲಿ ಅವೈಜ್ಞಾನಿಕ ಕಾಮಗಾರಿ ಸರಿಪಡಿಸಿ | KC valley
ಕೆ.ಸಿ.ವ್ಯಾಲಿ ನೀರು ನುಗ್ಗಿ ಅವಾಂತರ ಸೃಷ್ಟಿಸಿದ್ದ ಶ್ರೀನಿವಾಸಪುರ ವಿಧಾನಸಭಾ ೇತ್ರ ವ್ಯಾಪ್ತಿಯ ಕುಡುವನಹಳ್ಳಿಯ ಜಮೀನುಗಳಿಗೆ ಭಾನುವಾರ ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಸಂಸದ ಎಂ.ಮಲ್ಲೇಶ್ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಪಂ ಮಾಜಿ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ, ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಕಾರ್ಯಾಧ್ಯಕ್ಷ ಜನಪನಹಳ್ಳಿ ಆನಂದ್, ನಗರಸಭೆ ಸದಸ್ಯ ರಾಕೇಶ್ ಇದ್ದರು. KC valley
ಕೋಲಾರ:ಕೆ.ಸಿ.ವ್ಯಾಲಿ ನೀರು ಹರಿಯುವ ಕಾಲುವೆಯ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನೀರು ಉಕ್ಕಿ ಹರಿದು ಬೆಳೆಗಳು ನಾಶವಾಗಿದ್ದು, ಕೂಡಲೇ ಕಾಲುವೆ ನವೀಕರಣಗೊಳಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಒತ್ತಾಯಿಸಿದರು.
ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಡುವನಹಳ್ಳಿಯಲ್ಲಿ ಜಲಾವೃತವಾಗಿರುವ ಜಮೀನುಗಳನ್ನು ಭಾನುವಾರ ವೀಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್.ಅಗ್ರಹಾರ, ಮುದುವಾಡಿ ಕೆರೆಯಿಂದ ಮಣಿಟ್ಟವರೆಗೆ ಕೆ.ಸಿ.ವ್ಯಾಲಿ ನೀರು ಹರಿಯುವ ಕಾಲುವೆ ನವೀಕರಣ ಮಾಡಬೇಕು. ಕಾಲುವೆಗೆ 8 ಅಡಿ ಎತ್ತರದ ತಡೆಗೋಡೆ ಹಾಗೂ ನೀರು ಸರಾಗವಾಗಿ ಹರಿಯಲು 30 ಅಡಿ ಅಗಲ ವಿಸ್ತರಣೆ ಮಾಡಬೇಕು ಎಂದರು.
ಸಣ್ಣ ನೀರಾವರಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯೊಂದಿಗೆ ಮಾತನಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ಅವರೂ ಹೇಳಿದ್ದು, ಶ್ರೀ ರೈತರಿಗೆ ಆಗಿರುವ ಹಾನಿ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಶ್ರೀನಿವಾಸಪುರ ೇತ್ರಕ್ಕೆ ಕಾಂಗ್ರೆಸ್ ಸರ್ಕಾರ ಅನುದಾನದಲ್ಲಿ ತಾರತಮ್ಯ ಮಾಡಿದೆ. ಆಡಳಿತಾರೂಢ ಶಾಸಕರಿಗೆ ಒಂದು ರೀತಿ ಜೆಡಿಎಸ್ ಶಾಸಕರಿಗೆ ಮತ್ತೊಂದು ರೀತಿಯಲ್ಲಿ ಅನುದಾನ ನೀಡುತ್ತಿದ್ದು, ಅನ್ಯಾಯದ ವಿರುದ್ಧ ಕಾನೂನು ಸಮರಕ್ಕೆ ಕೈ ಹಾಕಿದ್ದು, ಈಗಾಗಲೇ ಉಚ್ಚನ್ಯಾಯಾಲಯಲ್ಲಿ ರಿಟ್ ಸಲ್ಲಿಸಲಾಗಿದೆ.ಕ್ಷೇತ್ರಕ್ಕೆ 100 ಕೋಟಿ ಅನುದಾನ ಕೂಡಬೇಕು. ಇಲ್ಲಿಯ ತನಕ ಒಂದೂ ಮನೆಯನ್ನೂ ಕೊಟ್ಟಿಲ್ಲ. ಅನುದಾನ ಬಿಡುಗಡೆ ಆದರೆ ಪ್ರತಿ ಗ್ರಾಮಕ್ಕೆ ಸೌಕರ್ಯ ಕಲ್ಪಿಸಲಾಗುವುದು ಎಂದರು.
ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಕೆ.ಸಿ.ವ್ಯಾಲಿಯಿಂದ ರೈತರ ಜಮೀನಿಗೆ ಆಗಿರುವ ಹಾನಿಯನ್ನು ನೇರ ಪರಿಶೀಲನೆ ನಡೆಸಲಾಗಿದೆ. ನೀರು ಹರಿಸುವ ಮುನ್ನ ಸಾಧಕ&ಬಾಧಕಗಳ ಬಗ್ಗೆ ಗಮನ ಹರಿಸಬೇಕಿತ್ತು. ಸರಿಯಾದ ಕಾಲುವೆ ಇಲ್ಲದೆ ರೈತರಿಗೆ ಸಮಸ್ಯೆ ತಂದೊಡ್ಡಿದ್ದಾರೆ. ನೀರು ರೈತರ ಜಮೀನುಗಳಿಗೆ ನುಗ್ಗಿ ಅಪಾರ ನಷ್ಟಕ್ಕೆ ಕಾರಣವಾಗಿದೆ ಎಂದರು.
ಕೆ.ಸಿ ವ್ಯಾಲಿಗೆ ವಿರೋಧ ಇಲ್ಲ. ಆದರೆ, ಮೂರನೇ ಹಂತದ ಶುದ್ಧೀಕರಣ ಮಾಡಿ ಹರಿಸಬೇಕಿತ್ತು. ಶುದ್ಧೀಕರಣ ಮಾಡದೆ ಹರಿಸಿ ಸಮಸ್ಯೆ ಉಂಟಾಗಿದೆ. ಕಲುಷಿತ ನೀರು ಸೇವಿಸಿ ಜನ, ಜಾನುವಾರು, ಪ, ಕೀಟಗಳಿಗೆ ಸಮಸ್ಯೆ ಉಂಟಾಗುತ್ತಿದೆ. ರೋಗಗಳು ಬರುತ್ತಿವೆ. ಬೆಳೆ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ, ಮೂರನೇ ಹಂತದ ಶುದ್ಧೀಕರಣ ಮಾಡಬೇಕು. ಕಾಲುವೆ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಮಳೆ ಬಂದಿದ್ದರಿಂದ ಬಹುತೇಕ ಕೆರೆಗಳು ಉಕ್ಕಿ ಹರಿಯುತ್ತಿವೆ. ಯರಗೋಳ್ ಜಲಾಶಯಕ್ಕೆ ಕೆ.ಸಿ ವ್ಯಾಲಿ ನೀರು ಹರಿಯುತ್ತಿದೆ. ಆ ನೀರನ್ನು ಜನರು ಕುಡಿಯುತ್ತಿದ್ದು ಏನಾದರೂ ಸಮಸ್ಯೆ ಉಂಟಾದರೆ ಯಾರು ಗತಿ ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಶ್ರೀನಿವಾಸಪುರ ಶಾಸಕರು ನ್ಯಾಯಾಲಯಕ್ಕೆ ಹೋಗಿ ಅನುದಾನ ಪಡೆಯುವಂಥ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ತಂದೊಡ್ಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಶೇಷಾಪುರ ಗೋಪಾಲ್, ಶ್ರೀನಿವಾಸ್, ದಿಂಬ ನಾಗರಾಜಗೌಡ, ವಿಶ್ವನಾಥ್ಗೌಡ, ರಾಮಚಂದ್ರೇಗೌಡ, ಕುಮಾರ್, ಶ್ರೀನಿವಾಸ್, ತಾಪಂ ಮಾಜಿ ಅಧ್ಯಕ್ಷ ಬಂಡಪಲ್ಲಿ ಕೃಷ್ಣಾರೆಡ್ಡಿ, ವೆಂಕಟೇಶ್ಗೌಡ, ಕೇಶವ, ವೆಂಕಟೇಶ್, ರುನಾಥ್, ಮನೋಹರ್, ಸೋಮಣ್ಣ, ಸಂತೋಷ್ ಇದ್ದರು.
3ತಿಂಗಳಲ್ಲಿ ರಸ್ತೆ ಪ್ರಗತಿ
ಕೆ.ಸಿ.ವ್ಯಾಲಿ ನೀರಿನಿಂದ ಹಲವು ಜಮೀನುಗಳ ಬೆಳೆ ಹಾಳಾಗಿವೆ. ಜಮೀನು ಪರಿಶೀಲನೆ ಮಾಡಿದ್ದು, ಕೆ.ಸಿ ವ್ಯಾಲಿ ಕಾಲುವೆ ಸರಿಪಡಿಸಬೇಕಿದೆ. ಕಾಲುವೆ ಹದಗೆಟ್ಟಿರುವ ಜತೆಗೆ ಮಳೆ ಬಂದು ಉಕ್ಕಿ ಜಮೀನಿಗೆ ಹರಿದಿದೆ. ಎರಡನೇ ಹಂತದ ಯೋಜನೆ ಕಾಮಗಾರಿಯಲ್ಲಿ ಎಡವಟ್ಟಾಗಿದೆ ಸಂಸದ ಎಂ.ಮಲ್ಲೇಶ್ ಬಾಬು ಆರೋಪಿಸಿದರು. ನ.13ಕ್ಕೆ ದಿಶಾ ಸಭೆ ಇದ್ದು, ಅಷ್ಟರೊಳಗೆ ಅಧಿಕಾರಿಗಳು ಪರಿಶೀಲನೆ ಮಾಡಿ ವರದಿ ಕೊಡಬೇಕು. ವೆಂಕಟಶಿವಾರೆಡ್ಡಿ ಈ ವಿಚಾರದಲ್ಲಿ ಗಭೀರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಹದೆಗೆಟ್ಟಿರುವ ರಸ್ತೆಗಳನ್ನು ಮೂರು ತಿಂಗಳಲ್ಲಿ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.