ಅಭಿಮಾನಿಗಳಿಗೆ ಗುಡ್​ನ್ಯೂಸ್​ ಕೊಟ್ಟ 'ಕೆಡಿ' ಚಿತ್ರತಂಡ| kd movie

kd
Published on

KD Movie; ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದಿಂದ ಅಭಿಮಾನಿಗಳಿಗೆ ಗುಡ್​ನ್ಯೂಸ್​ ಸಿಕ್ಕಿದೆ. ಕೆಡಿ ಚಿತ್ರದ ಶೂಟಿಂಗ್ ಕಂಪ್ಲೀಟ್​ ಆಗಿರುವ ಸುದ್ದಿಯನ್ನು ಸ್ವತಃ ಚಿತ್ರತಂಡ ಹೊರಹಾಕಿದ್ದು, ಶೀಘ್ರದಲ್ಲೇ ತೆರೆಗೆ ಬರ್ತೀವಿ ಎಂದು ಹೇಳಿದೆ.

ಈ ಬಗ್ಗೆ ಶೂಟಿಂಗ್ ಸೆಟ್​ ಸ್ಥಳದಿಂದ ನಿರ್ದೇಶಕ ಜೋಗಿ ಪ್ರೇಮ್ ಹಾಗೂ ನಟ ಧ್ರುವ ಸರ್ಜಾ ತಮ್ಮ ಇಡೀ ಟೀಂ ಜೊತೆಗೂಡಿ ವಿಡಿಯೋ ಮೂಲಕ ಶೂಟಿಂಗ್ ಮುಕ್ತಾಯಗೊಂಡಿದೆ ಎಂದು ಹೇಳಿದ್ದಾರೆ. ಇನ್ನೂ ಈ ವಿಡಿಯೋವನ್ನು ಜೋಗಿ ಪ್ರೇಮ್​ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೆಡಿ ಸಿನಿಮಾದಲ್ಲಿ ನಟ ಕಿಚ್ಚ ಸುದೀಪ್ ಕೂಡ ಇದ್ದಾರಾ ಎಂಬ ಅಭಿಮಾನಿಗಳ ಪ್ರಶ್ನೆಗೆ ನಿನ್ನೆ ಉತ್ತರ ಸಿಕ್ಕಿದೆ. ಹೈದರಾಬಾದ್​ನಲ್ಲಿ ಈ ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಸ್ಥಳದಿಂದ, ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದಾರೆ.

(ಏಜೆನ್ಸೀಸ್)

ಜೋಗಿ ಪ್ರೇಮ್ ನಿರ್ದೇಶನ ಮಾಡಿರೋ ಕೆಡಿ ಸಿನಿಮಾದಲ್ಲಿ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್ ಹಾಗೂ ರವಿಚಂದ್ರನ್ ಬಣ್ಣ ಹಚ್ಚಿದ್ದಾರೆ. ಇನ್ನೂ ಇಂತಹ ಮಹಾನ್​ ನಟರ ಜೊತೆ ಬಾದ್​ಷಾ ಕಿಚ್ಚ ಸುದೀಪ್​ ಕೂಡ ಇರಲಿದ್ದಾರೆ ಎಂಬ ವಿಚಾರವನ್ನು ಸ್ವತಃ ಜೋಗಿ ಪ್ರೇಮ್ ಅವರೇ ಹಂಚಿಕೊಂಡಿದ್ದಾರೆ. ಇನ್ನೂ ಧ್ರುವ ಸರ್ಜಾ, ಕಿಚ್ಚ ಸುದೀಪ್‌ ಹಾಗೂ ಪ್ರೇಮ್‌ ಜೊತೆಗಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್‌ ಆಗ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net