ಕೆ-ಸೆಟ್ ಪರೀಕ್ಷೆ ಜ.13ಕ್ಕೆ ಮತ್ತೆ ಮುಂದೂಡಿದ ಕೆಇಎ

kea
Published on

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕೆ-ಸೆಟ್ ಪರೀಕ್ಷೆಯನ್ನು ಮತ್ತೊಮ್ಮೆ ಮುಂದೂಡಿದ್ದು, ಡಿ.31ರ ಬದಲಾಗಿ ಜ.13ರಂದು ನಡೆಸುವುದಾಗಿ ತಿಳಿಸಿದೆ.

ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗೆ ಪರೀಕ್ಷಾ ಕೇಂದ್ರವಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕ್ರಮವಾಗಿ ಬೆಂಗಳೂರು ಮತ್ತು ತುಮಕೂರಿನಲ್ಲಿ ಪರೀಕ್ಷೆಗೆ ಹಾಜರಾಗಬೇಕು. ಹೆಚ್ಚುವರಿಯಾಗಿ ಧಾರವಾಡ ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾವೇರಿ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಮತ್ತು ಮೈಸೂರು ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮಂಡ್ಯ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಸೇರಿಸಿದೆ. ಇದರ ಹೊರತಾಗಿ ಉಳಿದ ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net