ಸಿಇಟಿ ಪರೀಕ್ಷೆ ಮುಂದಕ್ಕೆ: ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಲಿದೆ..

kea
Published on

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಯೋಜಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮುಂದೂಡಲ್ಪಟ್ಟಿದೆ.

ಕೆಇಎಯ ಕಾರ್ಯಕಾರಿ ನಿರ್ದೇಶಕರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೊನಾ ವೈರಸ್​ ಸೋಂಕಿನ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಲಾಕ್​ಡೌನ್​ ಘೋಷಿಸಿರುವುದರಿಂದ, ಪರೀಕ್ಷೆಗಳನ್ನು ಮುಂದೂಡಿರುವುದಾಗಿ ತಿಳಿಸಿದ್ದಾರೆ.

ಪರೀಕ್ಷೆಗಳನ್ನು ಮರುನಿಗದಿಪಡಿಸಿ ಸಿದ್ಧಪಡಿಸಲಾಗುವ ವೇಳಾಪಟ್ಟಿಯನ್ನು ಶ್ರೀಘ್ರದಲ್ಲೇ http://kea.kar.nic.in ವೆಬ್​ಸೈಟ್​ನಲ್ಲಿ ಪ್ರಕಟಿಸುವುದಾಗಿಯೂ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net