

ಬೆಂಗಳೂರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಪರೀಕ್ಷೆ ಸೇರಿ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.
ಪಿಎಸ್‌ಐ ಪರೀಕ್ಷೆಯನ್ನು ಅ.3ರಂದು ನಡೆಸಲಾಗುತ್ತಿದೆ. ಸೆ.22ರಂದು ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆ ದಿನಾಂಕದಂದೇ ಯುಪಿಎಸ್ಸಿ ಮುಖ್ಯ ಪರೀಕ್ಷೆ ಇದ್ದ ಕಾರಣ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಸರ್ಕಾರ ಇತ್ತೀಚೆಗೆ ಬಿ ಮತ್ತು ಸಿ ವರ್ಗದ ಹುದ್ದೆಗಳ ನೇಮಕ ಸಂದರ್ಭದಲ್ಲಿ ಅರ್ಜಿ ಸಲ್ಲಿಸಲು ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿರುವ ಕಾರಣ ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆ.19ರಿಂದ ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ವಿವರಿಸಿದ್ದಾರೆ.
ವಯೋಮಿತಿ ಸಡಿಲಿಕೆಯ ಲಾಭ ಪಡೆಯುವವರು ಸೇರಿ ಇತರ ಅರ್ಹರು ಸೆ.28ರವರೆಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಗೆ ಸೆ.29 ಕೊನೆ ದಿನ. ಈ ಹಿಂದೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ಅವರು ವಿವರಿಸಿದರು.
ಆದರೆ ಈ ಹುದ್ದೆಗಳಿಗೆ ಹಿಂದೆ ನಿಗದಿಪಡಿಸಿದ್ದ ದಿನಾಂಕಗಳಂದೇ ಪರೀಕ್ಷೆ ನಡೆಯಲಿದೆ. ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಕನ್ನಡ ಪರೀಕ್ಷೆ ಯನ್ನು ಅ.26 ರಂದು ನಡೆಸಲಾಗುತ್ತದೆ. ಅದರ ನಂತರ ಎಲ್ಲರಿಗೂ ಅ.27ರಂದು ಪತ್ರಿಕೆ- 1 ಮತ್ತು 2ರ ಪರೀಕ್ಷೆ ನಡೆಯಲಿದೆ ಎಂದರು.
ಕೆ-ಸೆಟ್ ಮತ್ತು ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನ.24ರಂದು ಪ್ರತ್ಯೇಕ ಪರೀಕ್ಷೆಗಳನ್ನು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಪರಿಷ್ಕೃತ ವೇಳಾಪಟ್ಟಿ
ದಿನಾಂಕ ಹುದ್ದೆ
ಅ.3 ಪಿಎಸ್‌ಐ
ಸೆ.29 ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿ ವಿವಿಧ ಹುದ್ದೆಗಳು (ಕನ್ನಡ ಪರೀಕ್ಷೆ)
ಅ.26 ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿ ವಿವಿಧ ಹುದ್ದೆಗಳು (ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಕನ್ನಡ ಪರೀಕ್ಷೆ)
ಅ.27 ಗ್ರಾಮ ಆಡಳತಾಧಿಕಾರಿ
ನ.24 ಕೆ-ಸೆಟ್
ನ.24 ಸಹಾಯಕ ಪ್ರಾಧ್ಯಾಪಕ (ರಾಯಚೂರು ವಿಶ್ವವಿದ್ಯಾಲಯ)