ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಸಂಚು: ಎಎಪಿ ಸಂಸದ ಸಂಜಯ್ ಸಿಂಗ್ ಹೀಗೆ ಹೇಳಿದ್ದೇಕೆ?

sanjay
Published on

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತೀಹಾರ್​ ಜೈಲಿನಲ್ಲಿ ಹತ್ಯೆ ಮಾಡಲು ಸಂಚು ನಡೆದಿದೆ ಎಂದು ಸಂಸದ ಸಂಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕೇಜ್ರಿವಾಲ್ ಅವರ ವೈದ್ಯಕೀಯ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿದ ಅವರು ಜೈಲಿನಲ್ಲಿ ಕೇಜ್ರಿವಾಲ್ ಗೆ ಏನಾದರೂ ಆಗಬಹುದು ಎಂದು ಹೇಳಿದರು.

ವೈದ್ಯಕೀಯ ಪರೀಕ್ಷೆಯ ವರದಿಯು ಕೇಜ್ರಿವಾಲ್ ಅವರಗೆ ಏನು ಬೇಕಾದರೂ ಆಗಬಹುದು ಎಂದು ಸ್ಪಷ್ಟಪಡಿಸುತ್ತದೆ. ಬಿಜೆಪಿ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕೇಜ್ರಿವಾಲ್ ಅವರ ಬದುಕಿನೊಂದಿಗೆ ಆಟವಾಡುತ್ತಿದ್ದಾರೆ ಎಂದರು.

ಉದ್ದೇಶಪೂರ್ವಕವಾಗಿ ಕೇಜ್ರಿವಾಲ್​ ತನ್ನ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಸಕ್ಸೇನಾ ಹೇಳಿಕೆಗೆ ಸಂಜಯ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ನ್ಯಾಯಾಂಗ ಬಂಧನದಿಂದ ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ವೈದ್ಯರು ಸೂಚಿಸಿದ ಆಹಾರ ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಸಕ್ಸೇನಾ ಕಳವಳ ವ್ಯಕ್ತಪಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net