

ಅರಕಲಗೂಡು: ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಸೋಮವಾರ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಕಾಂಗ್ರೆಸ್ ಮುಖಂಡ ಎಂ.ಟಿ. ಕೃಷ್ಣೇಗೌಡ ಮಾತನಾಡಿ, ಜಾಗತಿಕ ಮಟ್ಟದಲ್ಲಿ ರಾಜ್ಯದ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರು ಪ್ರಖ್ಯಾತಿ ಗಳಿಸಿರುವುದು ನಾಡಿನ ಹೆಮ್ಮೆಯಾಗಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಉತ್ತಮ ಆಡಳಿತಗಾರರಾಗಿದ್ದ ಕಾರಣ ಇಂದು ಮಹಾನಗರದಲ್ಲಿ ಕೋಟಿಗಟ್ಟಲೆ ಜನತೆಗೆ ಉದ್ಯೋಗ ನೀಡಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದರು. ಜನತೆಗೆ ಅನ್ನ ಸಂತರ್ಪಣೆ ಮಾಡಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಕೆಂಪೇಗೌಡರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ಗ್ರಾಪಂ ಮಾಜಿ ಅಧ್ಯಕ್ಷ ರಘು, ಮುಖಂಡರಾದ ನಾಗೇಶ್, ಮೂರ್ತಿ, ಪುಟ್ಟರಾಜು, ಮಧು, ಸಂದೇಶ್, ಸುದೀರ್, ಯೋಗೇಶ್, ಶ್ರೀನಿವಾಸ್ ರಂಗನಾಥ್, ಕುಮಾರ್, ಮಂಜಣ್ಣ, ರಾಜೇಗೌಡ ಹಾಗೂ ಗ್ರಾಮಸ್ಥರು ಇದ್ದರು.