ಮದ್ದೂರು: ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಜೂನ್ 27 ರಂದು ತಾಲೂಕು ಆಡಳಿತ ವತಿಯಿಂದ ವಿಜೃಂಭಣೆಯಿಂದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 8 ಗಂಟೆಗೆ ಪಟ್ಟಣದ ಶ್ರೀ ಉಗ್ರನರಸಿಂಹಸ್ವಾಮಿ ದೇವಸ್ಥಾನದ ಆವರಣದಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಪೇಟೆ ಬೀದಿಯ ಮುಖಾಂತರ ಮೆರವಣಿ ಮೂಲಕ ತಾಲೂಕು ಕ್ರೀಡಾಂಗಣಕ್ಕೆ ಮೆರವಣಿಗೆ ಬರಲಿದೆ. ಕಾರ್ಯಕ್ರಮಕ್ಕೆ ಭಾಗವಹಿಸುವವರು ಸಾಂಪ್ರದಾಯಿಕ ಉಡುಗೆಯಾದ ಶ್ವೇತವಸ್ತ್ರ ಧರಿಸಿ (ಬಿಳಿ ಅಂಗಿ ಹಾಗೂ ಪಂಚೆ) ಭಾಗವಹಿಸುವ ಮೂಲಕ ಕಾಯಕ್ರಮ ಯಶಸ್ವಿಗೊಳಿಸಬೇಕೆಂದು ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಅಧ್ಯಕ್ಷ ಚಂದೂಪುರ ಶಿವಲಿಂಗೇಗೌಡ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.