ಕೇಂಪಗೌಡ ಹೆಸರು ನಾಮಕರಣ ಪ್ರಕ್ರಿಯೆ ಪೂರ್ಣಗೊಳಿಸಿ

ಹನೂರಿನಲ್ಲಿ ನಾಡಪ್ರಭು ಕೆಂಪೇಗೌಡ ವೃತ್ತ ನಾಮಕರಣದ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸಮುದಾಯದ ಮುಖಂಡರು ಪಪಂ ಮುಖ್ಯಾಧಿಕಾರಿ ಅವರನ್ನು ಒತ್ತಾಯಿಸಿದರು. ಗಿರೀಶ್, ಹರೀಶ್‌ಕುಮಾರ್, ಮಂಜೇಶ್ ಇತರರಿದ್ದರು.
ಹನೂರಿನಲ್ಲಿ ನಾಡಪ್ರಭು ಕೆಂಪೇಗೌಡ ವೃತ್ತ ನಾಮಕರಣದ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸಮುದಾಯದ ಮುಖಂಡರು ಪಪಂ ಮುಖ್ಯಾಧಿಕಾರಿ ಅವರನ್ನು ಒತ್ತಾಯಿಸಿದರು. ಗಿರೀಶ್, ಹರೀಶ್‌ಕುಮಾರ್, ಮಂಜೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಒಕ್ಕಲಿಗ ಸಮುದಾಯದ ಮುಖಂಡರಿಂದ ಒತ್ತಾಯ
ಹನೂರು: ಪಟ್ಟಣದಿಂದ ಮಲೆ ಮಹದೇಶ್ವರ ಬೆಟ್ಟ ಹಾಗೂ ಎಲ್ಲೇಮಾಳಕ್ಕೆ ತೆರಳುವ ವಿಭಜಕ ವೃತ್ತಕ್ಕೆ ನಾಡಪ್ರಭು ಕೆಂಪೇಗೌಡ ನಾಮಕರಣದ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸುವಂತೆ ಒಕ್ಕಲಿಗ ಸಮುದಾಯದ ಮುಖಂಡರು ಪಪಂ ಮುಖ್ಯಾಧಿಕಾರಿ ರೇಖಾ ಅವರನ್ನು ಒತ್ತಾಯಿಸಿದರು.
ಮಂಗಳವಾರ ಪಪಂ ಕಚೇರಿಗೆ ಆಗಮಿಸಿದ ಮುಖಂಡರು ಮುಖ್ಯಾಧಿಕಾರಿ ಅವರನ್ನು ಭೇಟೆಯಾದ ವೇಳೆ ಪಪಂ ಮಾಜಿ ಉಪಾಧ್ಯಕ್ಷ ಗಿರೀಶ್ ಮಾತನಾಡಿ, ಈ ಹಿಂದೆ ಮುಖ್ಯಾಧಿಕಾರಿಯಾಗಿದ್ದ ಮಹೇಶ್‌ಕುಮಾರ್ ಅವರು ನಾಡಪ್ರಭು ಕೆಂಪೇಗೌಡ ವೃತ್ತ ನಾಮಕರಣ ಸಂಬಂಧ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ವರದಿಯನ್ನು ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ್ದರು. ಆದರೆ ಇದೀಗ ಪ್ರಕ್ರಿಯೆ ವಿಳಂಬವಾಗುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಆದ್ದರಿಂದ ಈ ಬಗ್ಗೆ ಅಗತ್ಯ ಕ್ರಮವಹಿಸಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಒತ್ತಾಯಿಸಿದರು.
ಕೊಳ್ಳೇಗಾಲ-ಯಳಂದೂರು ಒಕ್ಕಲಿಗರ ಸಂಘದ ನಿರ್ದೇಶಕ ಮಂಜೇಶ್ ಮಾತನಾಡಿ, ವೃತ್ತ ನಾಮಕರಣ ಸಂಬಂಧ ಈ ತಿಂಗಳ ಅಂತ್ಯದೊಳಗೆ ಅಗತ್ಯ ಕ್ರಮವಹಿಸದಿದ್ದಲ್ಲಿ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಮುಖ್ಯಾಧಿಕಾರಿ ರೇಖಾ ಪ್ರತಿಕ್ರಿಯಿಸಿ ಈ ಬಗ್ಗೆ ಪಪಂ ಆಡಳಿತಾಧಿಕಾರಿ ಅವರ ಗಮನಕ್ಕೆ ತಂದು ಅಗತ್ಯ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪಪಂ ಮಾಜಿ ಸದಸ್ಯ ಹರೀಶ್‌ಕುಮಾರ್, ಮುಖಂಡರಾದ ನಂದೀಶ್, ಸೋಮಶೇಖರ್, ಚೇತನ್, ಮಹೇಶ್, ಮಂಜು, ಸಂತೋಷ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net