ಅಭಿವೃದ್ಧಿಗೆ ಕೆಂಪೇಗೌಡರ ಆದರ್ಶಗಳೇ ಸ್ಫೂರ್ತಿ

hd kote
Published on

ಎಚ್.ಡಿ.ಕೋಟೆ: ತಾಲೂಕಿನ ಅಭಿವೃದ್ಧಿಗೆ ನಾಡಪ್ರಭು ಕೆಂಪೇಗೌಡ ಅವರ ಆದರ್ಶಗಳೇ ಸ್ಫೂರ್ತಿ ಎಂದು ಶಾಸಕ ಅನಿಲ್ ಚಿಕ್ಕಮಾದು ಅಭಿಪ್ರಾಯಪಟ್ಟರು.

ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶನಿವಾರ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿಯಲ್ಲಿ ಮಾತನಾಡಿದರು. ಎಲ್ಲರ ಒತ್ತಾಸೆ ಮೇರೆಗೆ ತಾಲೂಕಿನಲ್ಲಿ ಕೆಂಪೇಗೌಡರ ಭವನ ನಿರ್ಮಾಣಕ್ಕೆ ನಿವೇಶನ ಗುರುತಿಸಿ ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

ಒಕ್ಕಲಿಗ ಸಂಘದ ತಾಲೂಕು ಅಧ್ಯಕ್ಷ ಎಚ್.ಪಿ.ಪ್ರಕಾಶ್‌ಗೌಡ ಮಾತನಾಡಿ, ಕಳೆದ ವರ್ಷ ಸಂಘದ ವತಿಯಿಂದ ಅದ್ದೂರಿಯಾಗಿ ಕೆಂಪೇಗೌಡ ಜಯಂತಿ ಆಚರಿಸಲಾಗಿತ್ತು. ಆದರೆ ಈ ಬಾರಿ ಲಾಕ್‌ಡೌನ್‌ನಿಂದ ಕೈಬಿಡಲಾಗಿದೆ ಎಂದರು.

ಸಭೆಯಲ್ಲಿ ತಹಸೀಲ್ದಾರ್ ಆರ್.ಮಂಜುನಾಥ್, ತಾಪಂ ಇಒ ರಾಮಲಿಂಗಯ್ಯ, ಸಿಪಿಐ ಪುಟ್ಟಸ್ವಾಮಿ, ಎಸ್‌ಐ ಎಂ.ನಾಯಕ್, ಮುಖಂಡರಾದ ಮಹೇಶ್, ಉಮೇಶ್, ವಿಜಯ್ ಕುಮಾರ್, ರವಿಕುಮಾರ್, ವೀಣಾ, ಶಿವಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net