

ತಿರುವನಂತಪುರಂ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಕೇರಳದ ಮಾಜಿ ಶಾಸಕ ಪಿಸಿ ಜಾರ್ಜ್ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಕಳೆದ ಫೆಬ್ರವರಿಯಲ್ಲಿ
ಮಹಿಳೆಯೊಬ್ಬಳನ್ನು ತನ್ನ ಗೆಸ್ಟ್ಹೌಸ್ಗೆ ಕರೆಸಿಕೊಂಡಿದ್ದ ಮಾಜಿ ಶಾಸಕ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ನಿರಂತರ ಸಂದೇಶ ರವಾನಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತ ದೂರು ನೀಡಿದ್ದಾರೆ.
ಸದ್ಯ ಪೊಲೀಸರ ವಶದಲ್ಲಿರುವ ಮಾಜಿ ಶಾಸಕನನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ. ಈ ಮಧ್ಯೆ ಇಡೀ ಕೇರಳವನ್ನೇ ಬೆಚ್ಚಿ ಬೀಳಿಸಿದ್ದ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸ್ವಪ್ನಾ ಸುರೇಶ್ ಜತೆಗಿನ ಸಂಪರ್ಕ ಹೊಂದಿರುವ ಕುರಿತು ವಿಚಾರಣೆ ನಡೆಸಲಾಗುತ್ತಿದೆ.
ಮಾಜಿ ಶಾಸಕ ಜಾರ್ಜ್ ಆಗ್ಗಾಗ್ಗೇ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಭಾರೀ ಸುದ್ದಿಯಲ್ಲಿರುತ್ತಿದ್ದರು. ಇದೀಗ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧನಕ್ಕೊಳಪಟ್ಟಿದ್ದಾರೆ. (ಏಜೆನ್ಸೀಸ್)