ಕೇರಳ ಲಾಟರಿ ಮಾರುತ್ತಿದ್ದವನು ವಶಕ್ಕೆ

IMG-20251025-WA0139
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಅಕ್ರಮವಾಗಿ ಲಾಟರಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Published on

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಗ್ರಾಮದ ಶ್ರೀನಿವಾಸನಾಯ್ಕ ಎಂಬಾತ ಅಕ್ರಮವಾಗಿ ಕೇರಳದಿಂದ ತರಿಸಿದ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಬ್ ಇನ್‌ಸ್ಪೆಕ್ಟರ್ ಕೆ.ಎಂ.ಮಹೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿ 50 ರೂ. ಮುಖಬೆಲೆಯ 22 ಲಾಟರಿ ಟಿಕೆಟ್ ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net