

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ಮಾಪಕ, ನವರಂಗ್ ಚಿತ್ರಮಂದಿರದ ಮಾಲೀಕ ಕೆ.ಸಿ.ಎನ್ ಮೋಹನ್ (KCN Mohan) ಅವರು ಕಿಡ್ನಿ ವೈಫಲ್ಯದಿಂದ ಇಂದು ಮೃತಪಟ್ಟಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಅನೇಕ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ಕೆ.ಸಿ.ಎನ್ ಮೋಹನ್ ಅವರು ತೀವ್ರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಇಂದು ಕಿಡ್ನಿ ವೈಫಲ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಕೆ.ಸಿ.ಎನ್ ಮೋಹನ್ ಅವರ ನಿಧನದ ಸುದ್ದಿ ಕೇಳಿ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಕೆ.ಸಿ.ಎನ್ ಅವರು 1967 ರಲ್ಲಿ ಹಿಂದಿಯಲ್ಲಿ ಬಿಡುಗಡೆಯಾಗಿದ್ದ ಜೂಲಿ ಚಿತ್ರವನ್ನು 2006 ರಲ್ಲಿ ಕನ್ನಡದಲ್ಲಿ ನಿರ್ಮಿಸಿದ್ದರು. ತದನಂತರ ಅವರ ಸಹೋದರನ ಜತೆಗೂಡಿ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಜಯಸಿಂಹ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಮೋಹನ್ ಇಂದು ತಮ್ಮ ಇಬ್ಬರು ಪುತ್ರಿಯರು ಮತ್ತು ಓರ್ವ ಮಗನನ್ನು ಆಗಲಿದ್ದಾರೆ.