ಕೆಜಿಎಫ್​ ಬಾಬುವನ್ನು ಪಕ್ಷದಿಂದ ಅಮಾನತುಗೊಳಿಸಿದ ಕಾಂಗ್ರೆಸ್​

KGF Babu
Published on

ಬೆಂಗಳೂರು: ಇತ್ತೀಚೆಗೆ ಕೆಲವು ದಿನಗಳಿಂದ ನಾನಾ ಕಾರಣಗಳಿಂದಾಗಿ ಸುದ್ದಿಯಲ್ಲಿರುತ್ತಿದ್ದ ಕೆಜಿಎಫ್ ಬಾಬುವನ್ನು ಪಕ್ಷದಿಂದ ಅಮಾನತುಗೊಳಿಸಿ ಕಾಂಗ್ರೆಸ್ ಆದೇಶ ಹೊರಡಿಸಿದೆ. ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷ ಕೆ.ರೆಹಮಾನ್ ಖಾನ್ ಇಂದು ಈ ಆದೇಶ ಹೊರಡಿಸಿದ್ದಾರೆ.

ಪಕ್ಷದ ನೀತಿಗೆ ವಿರುದ್ಧವಾಗಿ ಮಾಧ್ಯಮದವರಿಗೆ ವಿವಿಧ ರೀತಿಯ ಹೇಳಿಕೆ ನೀಡುತ್ತಿರುವ ಬಗ್ಗೆ ಶಿಸ್ತುಪಾಲನಾ ಸಮಿತಿಯು ಕಾರಣ ಕೇಳಿ ನಿಮಗೆ ಮೂರು ತಿಂಗಳ ಹಿಂದೆಯೇ ನೋಟಿಸ್‌ ಜಾರಿ ಮಾಡಿದ್ದರೂ ನೀವು ಸಮಂಜಸ ಉತ್ತರವನ್ನು ನೀಡಿರುವುದಿಲ್ಲ ಎಂಬುದನ್ನು ಉಲ್ಲೇಖಿಸಿ ಅಮಾನತುಗೊಳಿಸಲಾಗಿದೆ.

ಅಲ್ಲದೆ ಇಂದು ಸಹ ಸ್ವಯಂಪ್ರೇರಿತರಾಗಿ ನೀವು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷರ ಪೂರ್ವಾನುಮತಿ ಇಲ್ಲದೆ ಕಾಂಗ್ರೆಸ್​ ಪಕ್ಷವನ್ನು ಉದ್ದೇಶಿಸಿ ವಿವಿಧ ಹೇಳಿಕೆಯನ್ನು ಮಾಧ್ಯಮಕ್ಕೆ ನೀಡಿದ್ದೀರಿ. ನಿಮ್ಮ ಈ ನಡೆಯೂ ಪಕ್ಷಕ್ಕೆ ಹಾನಿಯುಂಟು ಮಾಡುತ್ತಿದ್ದು ಹಾಗೂ ಪಕ್ಷದ ಹಿನ್ನಡೆಗೆ ಕಾರಣವಾಗುತ್ತಿದೆ ಎಂಬುದನ್ನು ಗಂಭೀರವಾಗಿ ಪರಿಗಣಿಸಿ, ಈ ಕೂಡಲೇ ನಿಮ್ಮನ್ನು ಪಕ್ಷದಿಂದ ಅಮಾನುತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net