

ಬೆಂಗಳೂರು: ಪತ್ನಿ ಸಮೇತ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ(KH Muniyappa), ವಿವಿಧ ಕಾಮಗಾರಿಗಳ ಉದ್ಘಾಟನೆ ಕುರಿತು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇಂದು ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ(Doddaballapur) ತಾಲೂಕಿನ ಶ್ರೀಕ್ಚೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳಿದ ಸಚಿವ ಕೆ.ಎಚ್ ಮುನಿಯಪ್ಪ, ನರಸಿಂಹ ಸ್ವಾಮಿ ಸಮೇತ ಸುಬ್ರಮಣ್ಯ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ.
ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಅನ್ನಭಾಗ್ಯ ಯೋಜನೆ ಸುಸೂತ್ರವಾಗಿ ಜಾರಿಯಾಗಲೆಂದು ದೇವರಿಗೆ ಕೈಮುಗಿದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಸುವ ವೇಳೆ ಸಚಿವ ಕೆ.ಎಚ್. ಮುನಿಯಪ್ಪ ಅವರೊಟ್ಟಿಗೆ ತಾಲೂಕು ಆಡಳಿತ ಅಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತ ಮಂಡಳಿ ಉಪಸ್ಥಿತರಿದ್ದರು.