ನೀರಿನಲ್ಲಿ ಮೂವರು ಬಾಲಕರು ದಾರುಣ ಸಾವು

drown-istock-1206856-16806813041680687380 (2)
Published on

ಕಾನಾಹೊಸಹಳ್ಳಿ : ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಸಮೀಪ ಕುಮತಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಗ್ರಾಮದ ಸಾಗರ್ (14), ಗುರು (14), ವಿನಯ್ ( 11) ಮೃತ ದುರ್ದೈವಿಗಳು. ಕಾನಾಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಸುರಿದ ಮಳೆಯಿಂದಾಗಿ ಕುಮತಿ ಗ್ರಾಮದ ಹಳ್ಳಕೊಳ್ಳಗಳು ತುಂಬಿ ಹರಿದಿದೆ. ದಸರಾ ರಜೆ ಇದ್ದ ಕಾರಣ ಬಾಲಕರು ಗ್ರಾಮದ ಬಳಿಯ ಹಳ್ಳದಲ್ಲಿ ನಿಂತಿದ ನೀರಿನಲ್ಲಿ ಈಜಾಡಲು ಹೋಗಿದ್ದಾರೆ. ಆದರೆ, ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವಿಜಯನಗರ ಎಸ್ಪಿ ಬಿ.ಎಲ್.ಶ್ರೀಹರಿಬಾಬು ಹಾಗೂ ಡಿವೈಎಸ್ ಪಿ.ಮಲ್ಲೇಶಪ್ಪ ಮಲ್ಲಾಪುರ, ಸಿಪಿಐ ದೊಡ್ಡಣ್ಣ ಹಾಗೂ ಪಿಎಸ್ ಐ ಸಿದ್ದರಾಮ ಬಿದರಾಣಿ ಭೇಟಿ ಬೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net