21ರಂದು ಖರ್ಗೆ ಜನ್ಮದಿನ ಆಚರಣೆ

Published on

ಎಚ್.ಡಿ.ಕೋಟೆ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 84ನೇ ಹುಟ್ಟುಹಬ್ಬವನ್ನು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಜು.21 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಯಾರ ಸುರೇಶ್ ತಿಳಿಸಿದರು.

ಮೈಸೂರಿನ ನಾರಾಯಣ ಹೃದಯಾಲಯ, ಆರ್ಯ ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣೆಯನ್ನು ಅಂದು ಏರ್ಪಡಿಸಲಾಗಿದೆ. ಬಡ 10 ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಗುವುದು. ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಳ್ಳೂರು ನಾಗೇಂದ್ರ ಅವರು ವಿವಿಧ ದೇಶಗಳಲ್ಲಿ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಿ ಅನೇಕ ಪದಕಗಳನ್ನು ದೇಶಕ್ಕೆ ಗಳಿಸಿದ್ದು ಅವರನ್ನು ಸನ್ಮಾನಿಸಲಾಗುವುದು ಎಂದರು. ಅಲ್ಲದೆ ವಿವಿಧ ಸಮಾಜ ಸೇವೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೈರಿಗೆ ಮಲ್ಲೇಶ್, ವನಸಿರಿ ಶಂಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net