

BBK: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಚಿತ್ರಿಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೋ ಸೀಲ್ ತೆಗೆಯಲು ಸೂಚನೆ ನೀಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ಗೆ ಕಾರ್ಯಕ್ರಮ ನಿರೂಪಕ, ನಟ ಕಿಚ್ಚ ಸುದೀಪ್ ಧನ್ಯವಾಧಗಳನ್ನು ತಿಳಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಡಿಸಿಎಂ ಪೋಸ್ಟ್ ರೀಟ್ವೀಟ್ ಮಾಡಿರುವ ಸುದೀಪ್, ಸಕಾಲಿಕ ಬೆಂಬಲ ನೀಡಿದ್ದಕ್ಕಾಗಿ, ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಸರ್ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇತ್ತೀಚೆಗೆ ನಡೆದ ಅವ್ಯವಸ್ಥೆ ಮತ್ತು ಗೊಂದಲದಲ್ಲಿ ಬಿಗ್ಬಾಸ್ ಭಾಗಿಯಾಗಿಲ್ಲ ಎನ್ನುವುದನ್ನು ನಿರೂಪಿಸಿದ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಈ ವಿಷಯದಲ್ಲಿ ಸಹಕಾರ ನೀಡಿದ ಮೊಹಮ್ಮದ್ ನಲಪಾಡ್ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.