ಕಿರಣ್ ರಾಜ್ ಸಿನಿಮಾಗೆ ರಘು ದೀಕ್ಷಿತ್ ಸಾಥ್! ಗಮನಸೆಳೆಯುತ್ತಿದೆ ಈ ಹೊಸ ಹಾಡು

WhatsApp Image 2024-03-27 at 3.07.07 PM
Published on

ಬೆಂಗಳೂರು: ನಟ ಕಿರಣ್ ರಾಜ್ ಅಭಿನಯದ 'ಭರ್ಜರಿ ಗಂಡು' ಚಿತ್ರದಿಂದ ಬಿಡುಗಡೆಗೊಂಡಿದೆ ಮತ್ತೊಂದು ಸುಮಧುರ ಹಾಡು.

ಪ್ರಸಿದ್ಧ್ ನಿರ್ದೇಶನದ ಈ ಚಿತ್ರಕ್ಕಾಗಿ ಡಾ||ವಿ. ನಾಗೇಂದ್ರ ಪ್ರಸಾದ್ ಬರೆದಿರುವ "ಹುಯ್ಯೋ ಹುಯ್ಯೋ ಮಳೆರಾಯ" ಎಂಬ ಹಾಡು ಇತ್ತೀಚಿಗೆ ರಿಲೀಸ್​ ಆಗಿದ್ದು, ಈ ಹಾಡನ್ನು ಖ್ಯಾತ ಗಾಯಕ ರಘು ದೀಕ್ಷಿತ್ ಹಾಡಿದ್ದಾರೆ.

ಗುಮ್ಮಿನೇನಿ ವಿಜಯ್ ಸಂಗೀತ ನೀಡಿರುವ ಈ ಹಾಡಿಗೆ ಇದೀಗ ಮೆಚ್ಚುಗೆಗಳು ಹರಿದುಬರುತ್ತಿದೆ. ರಾಜ್ಯದಲ್ಲಿ ಬಿಸಿಲಿನ ಬೇಗೆ ವ್ಯಾಪಕವಾಗಿ ಹೆಚ್ಚಾಗಿದ್ದು‌, ನೀರಿನ ಬವಣೆ ಕೂಡ ಎದುರಾಗಿದೆ. ಈ ಸಂದರ್ಭದಲ್ಲಿ ಉತ್ತಮ ಮಳೆಯಾಗಿ ನೀರಿನ ತೊಂದರೆಯಿಂದ ದೂರವಾಗಲಿ ಎಂದು ಚಿತ್ರದ ನಾಯಕ ಕಿರಣ್ ರಾಜ್ ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವರ ಬಳಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ "ಭರ್ಜರಿ ಗಂಡು" ಇದೇ ಏಪ್ರಿಲ್ 5ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಪ್ರಸಿದ್ದ್ ಸಿನಿಮಾಸ್, ಮದನ್ ಗೌಡ ಹಾಗೂ ಅನಿಲ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಗುಮ್ಮಿನೇನಿ‌ ವಿಜಯ್ ಸಂಗೀತ ಸಂಯೋಜನೆ, ಕಿಟ್ಟಿ ಕೌಶಿಕ್ ಛಾಯಾಗ್ರಹಣ ಹಾಗೂ ವೆಂಕಿ ಯುಡಿವಿ ಸಂಕಲನವಿರುವ ಈ‌ ಚಿತ್ರಕ್ಕೆ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ.

ಚಿತ್ರದಲ್ಲಿ ಕಿರಣ್ ರಾಜ್​ಗೆ ನಾಯಕಿಯಾಗಿ ಯಶಾ ಶಿವಕುಮಾರ್ ಮುಖ್ಯಭೂಮಿಕೆಯಲ್ಲಿದ್ದು, ರಮೇಶ್ ಭಟ್, ರಾಕೇಶ್ ರಾಜ್, ಸುರೇಖ, ವೀಣಾ ಸುಂದರ್, ಜಯಶ್ರೀ, ನಾಗೇಶ್ ರೋಹಿತ್, ಸೌರಭ್ ಕುಲಕರ್ಣಿ, ಮಡೆನೂರು ಮನು, ಗೋವಿಂದೇ ಗೌಡ ಮುಂತಾದವರ ತಾರಾಗಣವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net