ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ; ಸಂಸತ್​ ಆವರಣದಲ್ಲಿ ರಾಣಿ ಚೆನ್ನಮ್ಮನ ಜಯಂತಿ ಆಚರಣೆ

Kittur Delhi
Published on

ನವದೆಹಲಿ: ಬ್ರಿಟಿಷರ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ ನಡೆಸಿದ ಹೋರಾಟದ ವಿಜಯೋತ್ಸವಕ್ಕೆ 200 ವರ್ಷಗಳ ತುಂಬಿದ್ದು, ಸಂಸತ್ ಆವರಣದಲ್ಲಿರುವ ರಾಣಿ ಚೆನ್ನಮ್ಮ ಪ್ರತಿಮೆಗೆ ಲೋಕಸಭೆ ಸ್ಪೀಕರ್ ಓಂಬಿರ್ಲಾ, ಕೇಂದ್ರ ಸಚಿವರಾದ ಪ್ರಲ್ಹಾದ್​ ಜೋಶಿ, ವಿ. ಸೋಮಣ್ಣ, ಬಸವಜಯ ಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಪುಷ್ಪಾರ್ಷನೆ ಮಾಡುವ ಮೂಲಕ ನಮನ ಸಲ್ಲಿಸಿದರು.

ಪುಷ್ಪಾರ್ಷನೆ ಬಳಿಕ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಕಿತ್ತೂರು ರಾಣಿ ಚೆನ್ನಮ್ಮ ಭಾರತ ಸ್ವಾತಂತ್ರ‍್ಯ ಸಂಗ್ರಾಮದ ಬೆಳ್ಳಿ ಚುಕ್ಕಿ, ಮೊದಲ ಬಾರಿಗೆ ಸಂಸತ್‌ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಸಂತೋಷವಾಗಿದೆ. ಈ ವರ್ಷ ಮಾಡಿದರೆ ಸಾಲದು ಪ್ರತಿ ವರ್ಷವೂ ಈ ಕಾರ್ಯಕ್ರಮ ಸಂಸತ್‌ನಲ್ಲಿ ನಡೆಯಬೇಕು. ಈ ಮೂಲಕ ಉತ್ತರ ಭಾರತದ ಜನರಿಗೆ ಝಾನ್ಸಿ ರಾಣಿ ಲಕ್ಷ್ಮೀಬಾಯಿ ರೀತಿಯಲ್ಲಿ ರಾಣಿ ಚೆನ್ನಮ್ಮ ಅವರ ಶೌರ್ಯ ತಿಳಿಯಬೇಕಿದೆ ಎಂದು ಹೇಳಿದ್ದಾರೆ.

Kittur Delhi

ಸಚಿವ ವಿ. ಸೋಮಣ್ಣ ಮಾತನಾಡಿ, ಈ ದೇಶದ ಸ್ವತಂತ್ರ ಪೂರ್ವ ಇತಿಹಾಸದಲ್ಲಿ ಬ್ರಿಟಿಷರ ವಿರುದ್ಧ ಬಂಡಾಯ ಸಾರಿದ ಮೊದಲ ಧೀರ ಮಹಿಳೆ ಚೆನ್ನಮ್ಮ, ಬ್ರಿಟಿಷರನ್ನು ಸೋಲಿಸಿದ ದಿನಕ್ಕೆ 200 ವರ್ಷಗಳಾಗಿದೆ. ಬ್ರಿಟಿಷರ ವಿರುದ್ಧ ಹೋರಾಟದ ಮೂಲಕ ದೇಶದಲ್ಲಿ ಸಂಚಲನ ಮೂಡಿಸಿ, ಸ್ವಾತಂತ್ರ‍್ಯ ಹೋರಾಟಕ್ಕೆ ಪ್ರೇರಣೆ ನೀಡಿದರು. ಕಿತ್ತೂರು ರಾಣಿ ಚೆನ್ನಮ್ಮ ಅವರ ಇತಿಹಾಸವನ್ನು ದೇಶಕ್ಕೆ ಸಮರ್ಪಣೆ ಮಾಡುವ ಪ್ರಯತ್ನವೂ ಮಾಡಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿ, ಜಯಮೃತ್ಯುಂಜಯ ಸ್ವಾಮಿ, ರಾಜ್ಯಸಭೆ ಸದಸ್ಯರಾದ ಈರಣ್ಣ ಕಡಾಡಿ, ಲೆಹರ್ ಸಿಂಗ್, ಶಾಸಕ ಅರವಿಂದ ಬೆಲ್ಲದ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿ 200ಕ್ಕೂ ಹೆಚ್ಚು ದೆಹಲಿ ಕನ್ನಡಿಗರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net