ಕೆಕೆಆರ್‌ಡಿಬಿ ಅಕ್ರಮ ನಡೆಸಿದ ಅಧಿಕಾರಿಗಳ ರಕ್ಷಣೆ : ಜಮಾದಾರ ಆರೋಪ

IMG-20230911-WA0033
Published on

ಬಿಜೆಪಿಯಂತೆ ವರ್ತಿಸುತ್ತಿರುವ ಕಾಂಗ್ರೆಸ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಡೆಗೆ ಸೈಬಣ್ಣಾ ಆಕ್ರೋಶ

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿAದ ಹಿಂದಿನ ಸರ್ಕಾರದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಕಳಪೆಯಾಗಿವೆ. ಅಲ್ಲದೆ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಹಣ ದುರುಪಯೋಗ ಮಾಡಿಕೊಂಡಿರುವ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಅವರನ್ನು  ರಕ್ಷಣೆ ಮಾಡಲಾಗುತ್ತಿದೆ ಎಂದು ಅಹಿಂದ ಚಿಂತಕರ ವೇದಿಕೆ ಅಧ್ಯಕ್ಷ ಸೈಬಣ್ಣ ಜಮದಾರ ಆರೋಪಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ನೀಡಿದ ಅನುದಾನ ಸಹ ದುರುಪಯೋಗವಾಗಿದೆ.  ಈ  ಎರಡು ಸಂಸ್ಥೆಗಳಲ್ಲಿ ಅಕ್ರಮ ಆಗಿರುವುದರ ಕುರಿತು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಿದ್ದರೂ ಸಹ ಯಾಕೆ  ಕಾರ್ಯದರ್ಶಿ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.
ಅಧಿಕಾರಕ್ಕೆ ಬಂದ ಆರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು  ಹಣ ದುರುಪಯೋಗ ಮಾಡಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳತ್ತೇವೆ ಎಂದು ಹೇಳುತ್ತಲೇ ಇದ್ದರರು. ಆದರೆ, ಈಗ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು. ಹಿಂದೆ ಕಕ ಉತ್ಸವ ಜರುಗಿದಾಗ ಹಣ ಬಳಕೆಯಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬುದು ವರದಿಯಲ್ಲಿ ಉಲ್ಲೇಖಿಸಿದೆ. ಈಗ ಮತ್ತೇ ಅದೇ ಕಾರ್ಯದರ್ಶಿಗಳನ್ನು ಇಟ್ಟುಕೊಂಡು  ಅಮೃತ ಮಹೋತ್ಸವ ಮಾಡಲು ಹೊರಟಿದ್ದು ಸರಿಯಲ್ಲ ಎಂದರು.
ಅಲ್ಲದೆ  ಅಕ್ರಮ ಕುರಿತು ತನಿಖೆ ನಡೆಸಲು  ನೇಮಿಸಿದ್ದ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ಅದನ್ನು ಬಹಿರಂಗಗೊಳಿಸಬೇಕು ಎಂದು ಜಮಾದಾರ ಆಗ್ರಹಿಸಿದರು.  ತಪ್ಪು ಮಾಡಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಸರ್ಕಾರ ಅನುದಾನ ದುರ್ಬಳಕೆ ಮಾಡಿಕೊಂಡವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಸೈಬಣ್ಣ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ  ಮುಖಂಡರಾದ ಯಶವಂತರಾವ ಸೂರ್ಯವಂಶಿ, ಸಂಜು ಹೊಡಲಕರ್, ವಿಜಯಕುಮಾರ ಮತ್ತು ತಿಪ್ಪಣ್ಣ ಪವಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net