ಕೆಕೆಆರ್‌ಟಿಸಿ, ಬಿಎಂಟಿಸಿ ಹುದ್ದೆ: ತಾತ್ಕಾಲಿಕ ಪಟ್ಟಿ ಪ್ರಕಟ

BMTC
ಸಾಂದರ್ಭಿಕ ಚಿತ್ರ
Published on

ಬೆಂಗಳೂರು ಬಿಎಂಟಿಸಿ (ಕಲ್ಯಾಣ ಕರ್ನಾಟಕ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳಿಗೆ ಜು.13 ಮತ್ತು 14ರಂದು ನಡೆಸಲಾದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.

ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿ, ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಆ ಪ್ರಕಾರ ಅಂಕ ಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆಗಳು ಇದ್ದಲ್ಲಿ ಆ.3ರ ಸಂಜೆ 5.30ರೊಳಗೆ ಪೂರಕ ದಾಖಲೆಗಳೊಂದಿಗೆ ಕೆಇಎಗೆ ಸಲ್ಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net