ಕಲಬುರಗಿ ಬೀದರ್ ಹಾಗೂ ಯಾದಗಿರಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ ಸೆ.8 ರಂದು

nandini milk
Published on


ಕಲಬುರಗಿ :ಕಲಬುರಗಿ ಬೀದರ್ ಹಾಗೂ ಯಾದಗಿರಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ೨೦೨೨-೨೩ನೇ ಸಾಲಿನ ೩೮ ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಸಪ್ಟೆಂಬರ್ ೮ ರಂದು ಮಧ್ಯಾಹ್ನ ೧೨:೧೫ ಗಂಟೆಗೆ ಕಲಬುರಗಿ ನಗರದ ಗಂಜ್ ಪ್ರದೇಶದಲ್ಲಿ ಇರುವ ಶ್ರೀ ಸಾಲಾಸರ ಗಾರ್ಡನ್ ಫಂಕ್ಷನ್ ಹಾಲ್ ದಲ್ಲಿ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ಬೀದರ್ ಹಾಗೂ ಯಾದಗಿರಿ ಹಾಲು ಒಕ್ಕೂಟದ ಮುಂಭಾಗ ಹುಮನಾಬಾದ ರಸ್ತೆಯಲ್ಲಿ ಗಾರ್ಡನ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಒಕ್ಕೂಟದ ಅಧ್ಯಕ್ಷರಾದ ಶ್ರೀ ರಾಮಚಂದ್ರಪ್ಪ ಕೆ. ಪಾಟೀಲ ಇವರ ಘನ ಅಧ್ಯಕ್ಷತೆಯಲ್ಲಿ ವಹಿಸಲಾಗುವುದು.ಹಾಲು ಉತ್ಪಾದಕರ ಸಂಘಗಳ ಮಾನ್ಯ ಪ್ರತಿನಿಧಿಗಳು ಮಾತ್ರ ಸಭೆಯಲ್ಲಿ ಭಾಗವಹಿಸಬೇಕೆಂದು  ಕಲಬುರಗಿ-ಬೀದರ ಹಾಗೂ ಯಾದಗಿರಿ ಜಿಲ್ಲಾ ಸಹಕಾರಿ ಹಲು ಉತ್ಪಾದಕರ ಸಂಘಗಳ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಡಾ. ಸಿ.ಹೆಚ್.ಕಮಕೇರಿ ಅವರು ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net