

ಬೀರೂರು: ಶಾಲಾ ಮಕ್ಕಳು ಟಿವಿ, ಮೊಬೈಲ್ ಮೇಲೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಆದ್ದರಿಂದ ಪಾಲಕರು ಮಕ್ಕಳಿಗೆ ಉಪಯುಕ್ತ ಪುಸ್ತಕ, ಪತ್ರಿಕೆಗಳನ್ನು ನೀಡಬೇಕು. ಕಲಿಕಾ ಸಾಮರ್ಥ್ಯ ವೃದ್ಧಿಸಲು ವಿಜಯವಾಣಿ ವಿದ್ಯಾರ್ಥಿ ಮಿತ್ರ ಹೆಚ್ಚಿನ ಸಹಕಾರ ನೀಡುತ್ತದೆ ಎಂದು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್.ಮೋಹನ್‌ಕುಮಾರ್ ತಿಳಿಸಿದರು.
ಪಟ್ಟಣದ ಲಿಂಗದಹಳ್ಳಿ ರಸ್ತೆಯಲ್ಲಿರುವ ಮಾರ್ಗದ ಮಹದೇವಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ವಿಜಯವಾಣಿ ವಿದ್ಯಾರ್ಥಿ ಮಿತ್ರ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಪಠ್ಯಪುಸ್ತಕದ ಕಲಿಕೆಯಿಂದ ಮಾತ್ರ ಜ್ಞಾನ ವೃದ್ಧಿಸುವುದಿಲ್ಲ. ವಿದ್ಯಾರ್ಥಿ ಮಿತ್ರ ಸಂಚಿಕೆಯಲ್ಲಿ ಪಠ್ಯದ ವಿಷಯಗಳನ್ನು ಸರಳವಾಗಿ ಪ್ರಕಟಿಸುತ್ತಿದ್ದು, ಮಕ್ಕಳಿಗೆ ಸುಲಭ ರೀತಿಯಲ್ಲಿ ಅರ್ಥವಾಗುವುದು. ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೂ ಪೂರಕವಾಗಿದೆ. ಪ್ರತಿ ವಿದ್ಯಾರ್ಥಿಯೂ ನಿತ್ಯ ಈ ಸಂಚಿಕೆಯನ್ನು ಅಭ್ಯಾಸ ಮಾಡುವ ಮೂಲಕ ಶೈಕ್ಷಣಿಕ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿ ಶಾಲೆಗೆ ಗೌರವ ತರುವ ಜತೆಗೆ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಳ್ಳುವಂತೆ ಸಲಹೆ ನೀಡಿದರು.
ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ನಗದು ಬಹುಮಾನ ನೀಡಲಾಗುತ್ತದೆ ಎಂದರು.
ಮುಖ್ಯಶಿಕ್ಷಕ ವೈ.ಟಿ.ಬಾಬು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬ ಆಶಯದಿಂದ ವಿಜಯವಾಣಿ ವಿದ್ಯಾರ್ಥಿ ಮಿತ್ರ ಸಂಚಿಕೆಯನ್ನು ದಾನಿಗಳು ಉಚಿತವಾಗಿ ನೀಡುತ್ತಿದ್ದಾರೆ. 8,9,10ನೇ ತರಗತಿಗಳ ಎಲ್ಲ ವಿದ್ಯಾರ್ಥಿಗಳಿಗೂ ಸಂಚಿಕೆ ವಿತರಿಸಲಾಗುತ್ತದೆ. 8, 9ನೇ ತರಗತಿ ಮಕ್ಕಳೂ ಓದಿ ತಿಳಿದುಕೊಳ್ಳಬೇಕು. ನಿರಂತರ ಅಭ್ಯಾಸ ಮಾಡುವ ಜತೆಗೆ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.
ಹಿರಿಯ ಶಿಕ್ಷಕ ಹಿರೇಮಠ್ ಮಾತನಾಡಿ, ಇದೇ ಶಾಲೆಯಲ್ಲಿ ಕಲಿತು ರಾಜಕೀಯದಲ್ಲಿ ಸಕ್ರಿಯರಾಗಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿರುವ ಬಿ.ಆರ್.ಮೋಹನ್‌ಕುಮಾರ್ ಅವರು ಕಲಿತ ಶಾಲೆಗೆ ಏನಾದರೂ ಸೇವೆ ನೀಡಬೇಕು ಎಂಬ ಹಂಬಲದಲ್ಲಿ ವಿದ್ಯಾರ್ಥಿ ಮಿತ್ರ ಸಂಚಿಕೆಯನ್ನು ವಿತರಿಸುತ್ತಿರುವುದು ಶ್ಲಾಘನೀಯ ಎಂದರು.
ಶಿಕ್ಷಕರಾದ ನಟರಾಜ್, ಎಸ್.ಎನ್.ಮಲ್ಲಿಕಾರ್ಜುನ್, ಹರೀಶ್, ಮಂಜುಳಾ, ಅರುಣಾಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕ ದಕ್ಷಿಣ ಮೂರ್ತಿ, ಎ.ಒ.ಶಿವು ಮತ್ತು ವಿದ್ಯಾರ್ಥಿಗಳು ಇದ್ದರು.