

ಸೊರಬ: ದೇಶದ ಅರ್ಥ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದುವುದು ಅಗತ್ಯ. ನಿತ್ಯ ಜೀವನದಲ್ಲಿ ಅರ್ಥಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ. ನೇತ್ರಾವತಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಮರ್ಥ್ಯಸೇನ್ ಅರ್ಥಶಾಸ್ತ್ರ ವೇದಿಕೆಯಿಂದ ಆಯೋಜಿಸಿದ್ದ ತೆರಿಗೆಗಳು ಮತ್ತು ಸವಾಲುಗಳು ವಿಷಯ ಕುರಿತ ಉಪನ್ಯಾಸ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸಮಾಜದ ಪ್ರತಿಯೊಬ್ಬರ ಜೀವನದಲ್ಲಿ ಅರ್ಥಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ. ವ್ಯಕ್ತಿಗೂ ಮತ್ತು ತೆರಿಗೆಗೂ ಸಂಬಂಧವಿದೆ ಎಂದರು.
ಐಕ್ಯೂಎಸಿ ಸಹ ಸಂಚಾಲಕ ಡಾ. ಮೋಹನ್‌ಕುಮಾರ್ ಮಾತನಾಡಿ, ಕಾಲೇಜಿನಲ್ಲಿ ಆಯೋಜಿಸುವ ವಿವಿಧ ಉಪನ್ಯಾಸಗಳ ಉಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದು ಸಲಹೆ ನೀಡಿದರು.
ಸಹಾಯಕ ಪ್ರಾಧ್ಯಾಪಕ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಉಪನ್ಯಾಸಕ ರವಿ ಕಲ್ಲಂಬಿ ಮಾತನಾಡಿ, ವಿದ್ಯಾರ್ಥಿಗಳು ಪದವಿ ಹಂತದಲ್ಲಿ ಕೇವಲ ಅಂಕಗಳಿಕೆಗೆ ಸೀಮಿತವಾಗದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು ಎಂದರು.
ತೆರಿಗೆಗಳು ಮತ್ತು ಸವಾಲುಗಳು ಕುರಿತು ಶಿಕಾರಿಪುರ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ದೀಪಾ ಉಪನ್ಯಾಸ ನೀಡಿದರು. ಉಪನ್ಯಾಸಕಿ ಮಮತಾ ನಾಯಕ್, ಭುವನ್, ಸ್ಪಂದನಾ, ರಶ್ಮಿ, ಆದಿಶ್ರೀ ಪಾಟೀಲ್ ಇದ್ದರು.