168 ಪ್ರಯಾಣಿಕರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರು, ಕೊಚ್ಚಿಯಲ್ಲಿ ಏರ್ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ

airasia
Published on

ಕೊಚ್ಚಿ: ಏರ್ ಏಷ್ಯಾ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವುದು ಬೆಳಕಿಗೆ ಬಂದಿದೆ. ಕೊಚ್ಚಿಯಿಂದ ಬೆಂಗಳೂರಿಗೆ 168 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತ ಏರ್ ಏಷ್ಯಾ ವಿಮಾನವು ಇಲ್ಲಿನ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಹಿಂತಿರುಗಿದೆ.

ಭಾನುವಾರ ತಡರಾತ್ರಿ ಬೆಂಗಳೂರಿಗೆ ಹೊರಟಿದ್ದ ಕೊಚ್ಚಿ-ಬೆಂಗಳೂರು ವಿಮಾನ ರಾತ್ರಿ 11.15ಕ್ಕೆ ಟೇಕ್ ಆಫ್ ಆದ ಕೂಡಲೇ ತಾಂತ್ರಿಕ ಸಮಸ್ಯೆ ಎದುರಿಸಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ನಂತರದ ತನಿಖೆಯಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ.

ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ
ವಿಮಾನವು ಕೊಚ್ಚಿಗೆ ಹಿಂತಿರುಗಿದ ನಂತರ, ಶಂಕಿತ ಹೈಡ್ರಾಲಿಕ್ ವೈಫಲ್ಯದಿಂದ ಸಮಸ್ಯೆ ಉಂಟಾಗಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಯಾವುದೇ ಪ್ರಾಣಹಾನಿ ಅಥವಾ ಗಾಯದ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ ಕೂಡಲೇ ಮೊದಲಿನಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net