

ಕೊಡಗು: ಆನೆ ಹಲ್ಲು ಮಾರಾಟ ಮಾಡಲು ಯತ್ನಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಮೇಕೂರು ಹೊಸ್ಕರೆ ಬಳಿ ನಡೆದಿದೆ.
ಬಂಧಿತರನ್ನು ಮಧು (21) ಹಾಗೂ ಮೋಹನ್ ಚಂದ್ರ (25) ಎಂದು ಗುರುತಿಸಲಾಗಿದೆ. 20 ಕೆಜಿ ತೂಕದ 3 ಆನೆ ದವಡೆ ಹಲ್ಲುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಂತ ಸಹಿತ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗನ್ನು ಸಹ ಜಪ್ತಿ ಮಾಡಲಾಗಿದೆ.
ಮಡಿಕೇರಿಯ ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಂದ ಕಾರ್ಯಚರಣೆ ನಡೆದಿದ್ದು, ನಾಪತ್ತೆಯಾಗಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. (ದಿಗ್ವಿಜಯ ನ್ಯೂಸ್)