ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಮಂಜೂರಾದ ಸಾಲದ ಚೆಕ್ ನೀಡಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಸಿಬ್ಬಂದಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ.
ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್, ಚೇಲುವಾಂಬಾ ಸೋಮವಾರ ೧೦ ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಸೆರೆಯಾಗಿದ್ದಾರೆ. ವಿಜಯಲಕ್ಷ್ಮಿ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿದ್ದರು.
ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಮಂಜೂರಾದ ಸಾಲದ ಚೆಕ್ ನೀಡಲು ಒಂದು ತಿಂಗಳಿನಿಂದ ಸತಾಯಿಸುತ್ತಿ
ದ್ದರು. ೧೦ ಸಾವಿರ ರೂಪಾಯಿ ಲಂಚ ಕೇಳಿದ್ದರು. ಈ ಬಗ್ಗೆ ವಿಜಯಲಕ್ಷ್ಮಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಒಂದು ವಾರದ ಅವಧಿಯಲ್ಲಿ ಲೋಕಾಯುಕ್ತ ಪೊಲೀಸರು ನಡೆಸಿದ ಮೂರನೇ ದಾಳಿ ಇದಾಗಿದೆ.