ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿ ಸಾವು: ಕೊಡಗಿನಲ್ಲಿ ದುರ್ಘಟನೆ, ಮುಗಿಲು ಮುಟ್ಟಿದ ಪಾಲಕರ ಆಕ್ರಂದನ

Heart Attack
Published on

ಕೊಡಗು: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವಿಗೀಡಾಗಿರುವ ಆತಂಕಕಾರಿ ಘಟನೆ ಕೊಡಗಿನಲ್ಲಿ ನಡೆದಿದೆ.

ಕೀರ್ತನ್ (12) ಮೃತ ವಿದ್ಯಾರ್ಥಿ. ಕುಶಾಲನಗರ ತಾಲೂಕಿನ ಕೂಡುಮಂಗಳೂರು ನಿವಾಸಿಯಾದ ಕೀರ್ತನ್​, ಕೊಪ್ಪದ ಭಾರತಮಾತ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಯಾಗಿದ್ದ.

ನಿನ್ನೆ (ಜ.07) ರಾತ್ರಿ ಎರಡು ಬಾರಿ ಕಿರುಚಿಕೊಂಡ ಕೀರ್ತನ್​ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net