ಕಾಂಗ್ರೆಸ್ ಮುಖಂಡ ಶ್ರೀನಿವಾಸನ್ ಹತ್ಯೆ ಪ್ರಕರಣ: ಆರೋಪಿಗಳ ಮೇಲೆ ಫೈರಿಂಗ್

Firing
Published on

ಕೋಲಾರ: ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವೇಣುಗೋಪಾಲ್, ಮನೀಂದ್ರ ಕಾಲಿಗೆ ವೇಮಗಲ್ ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಸಂತೋಷ್​​​​ಗೂ ಗಾಯವಾಗಿದೆ. ಬಂಧಿಸಿ ಕರೆತರುವ ವೇಳೆ ಆರೋಪಿಗಳು ಪೊಲೀಸ್ ಸಿಬ್ಬಂದಿಯಾದ ಮಂಜುನಾಥ್ ಮತ್ತು ನಾಗೇಶ್​ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಇನ್ಸ್​ಪೆಕ್ಟರ್​ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ​ಗಾಯಗೊಂಡ ಪೊಲೀಸ್ ಸಿಬ್ಬಂದಿ, ಆರೋಪಿಗಳಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗೃಹ ಸಚಿವ ಜಿ ಪರಮೇಶ್ವರ್ ಆಪ್ತನ ಹತ್ಯೆ 

ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸನ್ ಅವರನ್ನು ಸೋಮವಾರ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಶ್ರೀನಿವಾಸನ್ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡರಾಗಿದ್ದು, ಜಿಲ್ಲಾಪಂಚಾಯ್ತಿ ಮಾಜಿ ಅಧ್ಯಕ್ಷರೂ ಆಗಿದ್ದರು. ಕೋಲಾರ ಜಿಲ್ಲೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಮೇಲೆ ಹಲ್ಲೆ ನಡೆದಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net