ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ

17sgr1 protest
ಕೋಲ್ಕತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಸಾಗರದಲ್ಲಿ ಭಾರತೀಯ ವೈದ್ಯಕೀಯ ಸಂಘ ಸಾಗರ ಶಾಖೆಯಿಂದ ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ಡಾ. ಕಿಶನ್ ಭಾಗವತ್, ಡಾ. ರಾಜನಂದಿನಿ ಕಾಗೋಡು, ಡಾ. ಪುಟ್ಟಪ್ಪ ಬೇತೂರು, ಡಾ. ಶಿವಯೋಗಿ ಬಿ. ಮಂಡಕ್ಕಿ ಇತರರಿದ್ದರು.
Published on

ಸಾಗರ: ಕೋಲ್ಕತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತಾಲೂಕಿನ 25ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳನ್ನು ಬಂದ್ ಮಾಡಲಾಗಿತ್ತು. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕಗಳನ್ನು ಬಿಟ್ಟು ಉಳಿದೆಲ್ಲ ಆಸ್ಪತ್ರೆಯ ವಿಭಾಗಗಳನ್ನು ಬೆಳಗ್ಗಿನಿಂದಲೇ ಬಂದ್ ಮಾಡಲಾಗಿತ್ತು.
ತಾಯಿ ಮಗು ಆಸ್ಪತ್ರೆಯಲ್ಲಿ ಪ್ರಸೂತಿ ವಿಭಾಗ ಕೆಲಸ ಮಾಡುತ್ತಿದ್ದು ಶನಿವಾರ ಎರಡು ಹೆರಿಗೆಗಳು ನಡೆದಿವೆ. ತುರ್ತು ಚಿಕಿತ್ಸೆಗೆ ಯಾವುದೆ ತೊಂದರೆಯಾಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಂದ್ ವಿಷಯ ತಿಳಿಯದೆ ಸಾಕಷ್ಟು ಜನ ಗ್ರಾಮಾಂತರ ಪ್ರದೇಶಗಳಿಂದ ಸಾಗರದ ಸರ್ಕಾರಿ ಆಸ್ಪತ್ರೆಗೆ ಬಂದವರು ಕಾಯುತ್ತಲೇ ಕುಳಿತಿದ್ದರು.
ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಶುಕ್ರವಾರ ಭಾರತೀಯ ವೈದ್ಯಕೀಯ ಸಂಘದ ಸಾಗರ ಶಾಖೆಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಡಾ. ಬಿ.ಜಿ.ಸಂಗಮ್ ಮಾತನಾಡಿ, ವೈದ್ಯೆ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಮಹಿಳಾ ವೈದ್ಯರು ನಿರ್ಭಿತಿಯಿಂದ ಕರ್ತವ್ಯ ನಿರ್ವಹಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ವೈದ್ಯೆ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಕೋಲ್ಕತದಲ್ಲಿ ಪ್ರತಿಭಟನೆ ಮಾಡುವಾಗ ಗೂಂಡಾಗಳು ವೈದ್ಯರ ಮೇಲೆ ಹಲ್ಲೆ ನಡೆಸಿರುವ ಕೃತ್ಯ ಖಂಡನೀಯ. ವೈದ್ಯರ ಮೇಲೆ ಹಲ್ಲೆ ಜತೆಗೆ ಸಾಕ್ಷಿ ನಾಶಕ್ಕೆ ಪ್ರಯತ್ನ ನಡೆದಿದೆ. ರೋಗಿಗಳ ರಕ್ಷಣೆಗೆ ನಿಂತಿರುವ ವೈದ್ಯರಿಗೆ ಸೂಕ್ತ ರಕ್ಷಣೆ ಇಲ್ಲ ಎಂದರು
ಡಾ. ಕಿಶನ್ ಭಾಗವತ್, ಡಾ. ರಾಜನಂದಿನಿ ಕಾಗೋಡು, ಡಾ. ಪುಟ್ಟಪ್ಪ ಬೇತೂರು, ಡಾ. ಶಿವಯೋಗಿ ಬಿ. ಮಂಡಕ್ಕಿ, ಡಾ. ರವಿಕಿರಣ್, ಡಾ. ಶಶಿಕುಮಾರ್, ಡಾ. ಪ್ರಸನ್ನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net