

Suvendu Adhikari: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಗೆ ಕೊಲ್ಕತ್ತಾ ನ್ಯಾಯಾಲಯ ತಾತ್ಕಾಲಿಕ ನಿರ್ಬಂಧ ಹೇರಿದೆ
ಡೈಮಂಡ್ ಹಾರ್ಬರ್ ಕ್ಷೇತ್ರದ ಸಂಸದ ಬ್ಯಾನರ್ಜಿ ಸಲ್ಲಿಸಿದ್ದ ಸಿವಿಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿರುವ ಅಲಿಪೋರ್ 8 ನೇ ನ್ಯಾಯಾಲಯದ ನ್ಯಾಯಾಧೀಶರು, ಆಗಸ್ಟ್ 19 ರವರೆಗೆ ಪ್ರತಿವಾದಿಯು, ವಾದಿಯ ಮಾನನಷ್ಟಕ್ಕೆ ಕಾರಣವಾಗುವ ಯಾವುದೇ ಹೇಳಿಕೆಗಳನ್ನು ನೀಡುವುದು, ಪ್ರಕಟಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಆದೇಶಿಸಿದ್ದಾರೆ.
ಜುಲೈ 26 ರಂದು ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ವಿಪಕ್ಷದ ನಾಯಕ ಸುವೇಂದು ಅಧಿಕಾರಿ, ತಮ್ಮ ವಿರುದ್ಧ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಬ್ಯಾನರ್ಜಿ ಆರೋಪಿಸಿ,ಇನ್ನು ಮುಂದೆ ಅವಹೇಳನಕಾರಿಯಾಗಿ ಮಾತನಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ಸಂಸದ ಬ್ಯಾನರ್ಜಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.(ಏಜೆನ್ಸೀಸ್)