ಕೊಳ್ಳೇಗಾಲದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

21-kgl-3,
Published on

ಕೊಳ್ಳೇಗಾಲ: ಪಟ್ಟಣದ ವಿಶ್ವ ಚೇತನ ಸಮೂಹ ವಿದ್ಯಾಸಂಸ್ಥೆ ಆವರಣದಲ್ಲಿ ಎಚ್.ಕೃಷ್ಣಸ್ವಾಮಿ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್, ರೋಟರಿ ಕ್ಲಬ್ ಮತ್ತು ರೋಟರಿ ಮಿಡ್ ಟೌನ್ ಹಾಗೂ ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಭಾನುವಾರ ಕಣ್ಣಿನ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಎಚ್.ಕೆ.ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ಮಾತನಾಡಿ, ನಮ್ಮ ಸಂಸ್ಥೆಯು ಆರಂಭದ ದಿನಗಳಿಂದಲೂ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಶೈಕ್ಷಣಿಕ ಸೇವೆ ಜತೆಗೆ ಆರೋಗ್ಯ ಸೇವೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಬಡವರು, ರೈತರು, ಹಿಂದುಳಿದ ವರ್ಗದವರಿಗೆ ಉಚಿತ ಆರೋಗ್ಯ ಶಿಬಿರವನ್ನು ಪ್ರತಿ ತಿಂಗಳು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.

ಶಿಬಿರದಲ್ಲಿ 107 ರೋಗಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು. 30 ಜನರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆ ಗಾಗಿ ಅರವಿಂದ ಕಣ್ಣಿನ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಅರವಿಂದ ಕಣ್ಣಿನ ಆಸ್ಪತ್ರೆಯ ಡಾ.ಜೋ ಕ್ರಿಸ್ಟೋಫರ್, ಸಂಯೋಜಕ ವಿಜಯ್ ಕುಮಾರ್, ವಿಶ್ವ ಚೇತನ ವಿದ್ಯಾಸಂಸ್ಥೆ ಸಂಯೋಜಕ ರಾಜೇಶ್, ವ್ಯವಸ್ಥಾಪಕ ರವೀಂದ್ರ, ಸಿಬ್ಬಂದಿ ಪದ್ಮಾ ಜ್ಯೋತಿನಿಂಗಯ್ಯ, ಅರುಣ್, ಮೋಹನ್ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net