ಕೋರೆಗಾಂವ್ ವಿಜಯೋತ್ಸವ ಮೆರವಣಿಗೆ

koregaon (1)
ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ಆಲ್ದೂರಿನಲ್ಲಿ ಭೀಮ್ ಆರ್ಮಿಯಿಂದ ಆಯೋಜಿಸಿದ್ದ ಮೆರವಣಿಗೆ.
Published on

ಆಲ್ದೂರು: ಪಟ್ಟಣದಲ್ಲಿ ಭಾನುವಾರ ಭೀಮ್ ಆರ್ಮಿಯಿಂದ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ಬೀರಂಜಿ ಹಳ್ಳದಿಂದ ಆರಂಭವಾದ ಮೆರವಣಿಗೆಯಲ್ಲಿ ಅಂಬೇಡ್ಕರ್ ಭಾವಚಿತ್ರದೊಂದಿಗೆ ಸಾವಿರಾರರು ಜನ ಡಿಜೆ ಶಬ್ದಕ್ಕೆ ಹೆಜ್ಜೆ ಹಾಕಿದರು.

ಯುವಕರು ನೀಲಿಬಣ್ಣದ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದರು. ಪಟ್ಟಣದ ತುಂಬ ನೀಲಿ ಬಾವುಟಗಳು, ಬಂಟಿಂಗ್ಸ್ ರಾರಾಜಿಸಿದವು. ಪಟ್ಟಣದ ಮುಖ್ಯರಸ್ತೆಯಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರಿಂದ ಸಂಚಾರ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡಿದರು. ವಾಹನಗಳ ಸುಗಮ ಸಂಚಾರಕ್ಕೆ ಪೊಲೀಸರು ಹರಸಾಹಸಪಟ್ಟರು. ವಾಹನ ಸಾವರರು ಪೋಸ್ಟ್ ಆಫೀಸ್ ಹಾಗೂ ರೈಸ್ ಮಿಲ್ ರಸ್ತೆ ಮೂಲಕ ಸಾಗಿದರು.
ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಎಸ್ಪಿ ಡಾ. ವಿಕ್ರಮ ಅಮಟೆ, ಎಎಸ್ಪಿ ಕೃಷ್ಣಮೂರ್ತಿ, ಡಿವೈಎಸ್ಪಿ ಶೈಲೇಂದ್ರ, ಸಿಪಿಐ ಸತ್ಯನಾರಾಯಣ, ವಿವಿಧ ಠಾಣೆಗಳ ಪಿಎಸ್‌ಐಗಳು ಸ್ಥಳದಲ್ಲಿದ್ದರು.
ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಗಿರೀಶ್, ಅಂಬೇಡ್ಕರ್ ಹೋರಾಟ ವೇದಿಕೆ ಅಧ್ಯಕ್ಷ ನವರಾಜ್, ಗೌರವಾಧ್ಯಕ್ಷ ಹೊನ್ನಪ್ಪ, ಪುತ್ಥಳಿ ನಿರ್ಮಾಣ ಸಮಿತಿ ಅಧ್ಯಕ್ಷ ಗಣೇಶ್, ಡಿಎಸ್‌ಎಸ್ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net