ರಾಜ್ಯದಲ್ಲಿ ಕ್ರೈಮ್ ಪಾಸಿಟಿವಿಟಿ ರೇಟ್ ಹೆಚ್ಚಳ ಆತಂಕಕಾರಿ

jivraj
ಬಾಳೆಹೊನ್ನೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪರ ಮಾಜಿ ಸಚಿವ ಡಿ.ಎನ್.ಜೀವರಾಜ್ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಮತಯಾಚಿಸಿದರು. ಟಿ.ಎಂ.ಉಮೇಶ್, ಭಾಸ್ಕರ್ ವೆನಿಲ್ಲಾ, ಪ್ರಭಾಕರ್ ಪ್ರಣಸ್ವಿ, ಕೆ.ಆರ್.ದೀಪಕ್, ಕೆ.ಟಿ.ಗೋವಿಂದೇಗೌಡ ಇದ್ದರು.
Published on

ಬಾಳೆಹೊನ್ನೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಕ್ರೈಮ್ ಪಾಸಿಟಿವಿಟಿ ರೇಟ್ ಹೆಚ್ಚಾಗಿರುವುದು ಆತಂಕಕಾರಿ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
ಪಟ್ಟಣದಲ್ಲಿ ಬಿಜೆಪಿ, ಜೆಡಿಎಸ್‌ಯಿಂದ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ರೋಡ್ ಶೋ, ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಸರ್ಕಾರ ಇದೆಯೇ ಎಂಬುದನ್ನು ಯೋಚಿಸುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ದುಃಸ್ಥಿತಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಮತದಾರರು ಈ ಬಾರಿ ಬಿಜೆಪಿಯನ್ನು ಸಂಪೂರ್ಣ ಬೆಂಬಲಿಸುವ ಭರವಸೆ ಇದೆ. ಈ ಬಾರಿ ಜೆಡಿಎಸ್ ಸಹ ಮೈತ್ರಿ ಮಾಡಿಕೊಂಡಿರುವುದರಿಂದ ಶೃಂಗೇರಿ ಕ್ಷೇತ್ರದಲ್ಲಿ ಈ ಬಾರಿ 30 ಸಾವಿರಕ್ಕೂ ಅಧಿಕ ಮತಗಳ ಲೀಡ್ ಬಿಜೆಪಿ ಅಭ್ಯರ್ಥಿಗೆ ದೊರೆಯಲಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಕಾಂಗ್ರೆಸ್ ಜನರನ್ನು ಗೊಂದಲಕ್ಕೆ ಸಿಲುಕಿಸುವ ಕೆಲಸ ಮಾಡುತ್ತಿದೆ. ಶೃಂಗೇರಿ ಕ್ಷೇತ್ರದ ಮತದಾರರು ಪ್ರಜ್ಞಾವಂತರಾಗಿದ್ದು ದೇಶಕ್ಕಾಗಿ ಈ ಬಾರಿ ನರೇಂದ್ರ ಮೋದಿ ಅವರಿಗೆ ಮತವನ್ನು ನೀಡುವ ವಿಶ್ವಾಸವಿದೆ. ಇಂದು ನಮ್ಮ ಮನೆಯ ಮಕ್ಕಳನ್ನು ರಕ್ಷಣೆ ಮಾಡುವುದು ಹೇಗೆ ಎಂಬ ಅನಿವಾರ್ಯ ಸನ್ನಿವೇಶ ರಾಜ್ಯದಲ್ಲಿ ಉದ್ಭವವಾಗಿದೆ ಎಂದರು.
ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಡಿ.ಎನ್.ಜೀವರಾಜ್ ನೇತೃತ್ವದಲ್ಲಿ ಪಟ್ಟಣದ ಕೊಪ್ಪ ರಸ್ತೆಯಿಂದ ಚಿಕ್ಕಮಗಳೂರಿನ ರೋಟರಿ ಸರ್ಕಲ್‌ವರೆಗೆ ರೋಡ್ ಶೋ ನಡೆಸಿ ಚುನಾವಣಾ ಪ್ರಚಾರ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net