ಹಿರಿಯ ನಟ ಕೋಟ ಶ್ರೀನಿವಾಸ ರಾವ್ ನಿಧನ: ಕಂಬನಿ ಮಿಡಿದ ಟಾಲಿವುಡ್‌ ಚಿತ್ರರಂಗ, ಗಣ್ಯರು | Kota Srinivasa Rao

ವಿಜಯವಾಣಿ (53)
Published on

Kota Srinivasa Rao: ತೆಲುಗು ಚಿತ್ರರಂಗದ ಹಿರಿಯ ನಟ ಕೋಟ ಶ್ರೀನಿವಾಸ ರಾವ್ (83) ಇಂದು (ಜು.13) ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಫಿಲ್ಮ್‌ನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕೋಟ ಶ್ರೀನಿವಾಸ ರಾವ್ ಜುಲೈ 10, 1942 ರಂದು ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ ಜನಿಸಿದರು. ನಾಲ್ಕು ದಶಕಗಳ ಕಾಲ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿದ ಅವರು, ತಮ್ಮ ವೃತ್ತಿಜೀವನದಲ್ಲಿ ಹಲವು ವಿಶಿಷ್ಟ ಪಾತ್ರಗಳನ್ನು ನಿರ್ವಹಿಸಿದ್ದಾರೆ. ರಂಗಭೂಮಿಯ ಹಿನ್ನಲೆಯಿಂದ ಬಂದ ಶ್ರೀನಿವಾಸ ರಾವ್​, ಹಲವು ವರ್ಷಗಳ ಕಾಲ ಚಿತ್ರಪ್ರೇಮಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.

1978ರಲ್ಲಿ 'ಪ್ರಾಣಂ ಖರೀಧು' ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಾವ್​, ತಮಿಳು, ಹಿಂದಿ ಮತ್ತು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇಲ್ಲಿಯವರೆಗೆ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಹಿರಿಯ ನಟನ ಅಗಲಿಕೆ ಸುದ್ದಿ ತಿಳಿದು ಟಾಲಿವುಡ್​ ಚಿತ್ರರಂಗ, ಅಭಿಮಾನಿಗಳು ಮತ್ತು ಗಣ್ಯರು ಕಂಬನಿ ಮಿಡಿದಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net