

ಗೋಣಿಕೊಪ್ಪಲು :ಚೆಕ್ಕೇರ ಒಕ್ಕ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗ ದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೆಕ್ಕೇರ ಕ್ರಿಕೆಟ್ ನಮ್ಮೆಯಲ್ಲಿ 7 ತಂಡಗಳು ಮುನ್ನಡೆ ಪಡೆದುಕೊಂಡಿವೆ.
ಬಲ್ಯಮಾಡ ಮತ್ತು ಕೊಟ್ರಮಾಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮೊದಲು ಬ್ಯಾಟ್ ಮಾಡಿದ ಬಲ್ಯಮಾಡ ತಂಡ ನಿಗದಿತ 6 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 44 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಕೊಟ್ರಮಾಡ ತಂಡ 3 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿ ಜಯಗಳಿಸಿತು.
ಕುಟ್ಟಂಡ ಮತ್ತು ಚಂಗಣಮಾಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮೊದಲು ಬ್ಯಾಟ್ ಮಾಡಿದ ಚಂಗಣಮಾಡ ತಂಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 53 ರನ್ ಗಳಿಸಿತು. ಕುಟ್ಟಂಡ ತಂಡ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಚೆನಿಯಂಡ ಮತ್ತು ಸಿದ್ದಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಚಿನಿಯಂಡ ತಂಡ ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 83 ರನ್ ಗಳಿಸಿತು. ಸಿದ್ದಂಡ ತಂಡ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಕೋಚಮಂಡ ಮತ್ತು ಅಟ್ರಂಗಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಅಟ್ರಂಗಡ ತಂಡ 6 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿತು. ಕೋಚಮಂಡ ತಂಡ 3 ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಸುಳ್ಳಿಮಾಡ ಮತ್ತು ಉದ್ದಿನಾಡಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಸುಳ್ಳಿಮಾಡ ತಂಡ 6 ಓವರ್‌ಗಳಲ್ಲಿ 2 ವಿಕೆಟ್ ನಷ್ಟವಿಲ್ಲದೆ 74 ರನ್ ಗಳಿಸಿತು. ಉದ್ದಿನಾಡಂಡ ತಂಡ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿತು.
ಕೈಪಟ್ಟಿರ ಮತ್ತು ತಡಿಯಂಗಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಕೈಪಟ್ಟಿರ ತಂಡ ನಿಗದಿತ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 73 ರನ್ ಗಳಿಸಿತು. ತಡಿಯಂಗಡ ತಂಡ 6 ವಿಕೆಟ್ ನಷ್ಟಕ್ಕೆ 40 ರನ್ ಗಳಿಸಲಷ್ಟೇ ಶಕ್ತವಾಯ್ತು. ಪಟ್ರಪಂಡ ಮತ್ತು ಐಮುಡಿಯಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಐಲಪಂಡ ತಂಡ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿತು. ಪಟ್ರಪಂಡ ತಂಡ 2 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
--------
ಇಂದಿನ ಪಂದ್ಯಗಳು
9 ಗಂಟೆಗೆ ನೆಲ್ಲಿರ-ಚಂಗುಲಂಡ
10ಕ್ಕೆ ನಾಯಕಂಡ- ಅರಮಣಮಡ
11ಕ್ಕೆ ಗಂಟೆಗೆ ಚೀರಂಡ-ಮೂಕಳೆರ
12ಕ್ಕೆ ಬಲ್ಲಾಡಿಚಂಡ-ಚೀಯಂಡಿರ
1 ಗಂಟೆಗೆ ಕನ್ನಿಗಂಡ-ಪೊನ್ನಿಮಡ
2 ಗಂಟೆಗೆ ಪಾರುವಂಡ-ಮುಕ್ಕಾಟಿರ (ಕುಂಜಿಲಗೇರಿ)
3 ಗಂಟೆಗೆ ಜಮ್ಮಡ (ಅರ್ವತೋಕ್ಲು)-ಮುಕ್ಕಾಟಿರ (ಮಾದಾಪುರ)