ವಸತಿ ಶಾಲೆ ಆವರಣದಲ್ಲಿ ಕೋವಿಡ್ ಉಪ ಕೇಂದ್ರ

09 KRN-2
Published on

ಕೆ.ಆರ್.ನಗರ: ತಾಲೂಕಿನ ಅರಕೆರೆ ಬಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಕೋವಿಡ್ ಉಪ ಕೇಂದ್ರ ತೆರೆಯಲು ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಆರ್.ಮಹೇಂದ್ರಪ್ಪ ನೇತೃತ್ವದ ತಂಡ ಗುರುವಾರ ಸ್ಥಳ ಪರಿಶೀಲಿಸಿತು.

ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಆರೋಗ್ಯ ಇಲಾಖೆ ಸ್ಥಳೀಯವಾಗಿಯೇ ಕೊವೀಡ್ ಉಪ ಕೇಂದ್ರ ತೆರೆಯಲು ಆದೇಶ ನೀಡಿದೆ. ಹೀಗಾಗಿ ವಸತಿ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಸ್ಥಳ ಪರಿಶೀಲನೆ ಮಾಡಲಾಗಿದೆ ಎಂದು ಡಾ.ಕೆ.ಆರ್.ಮಹೇಂದ್ರಪ್ಪ ಸುದ್ದಿಗಾರರಿಗೆ ತಿಳಿಸಿದರು.

ಸೋಂಕಿತರು ಹಾಗೂ ರೋಗ ಲಕ್ಷಣ ಕಂಡುಬಂದವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುವುದು. ಇದಕ್ಕಾಗಿ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಲ್ಲದೆ ಎಷ್ಟು ಹಾಸಿಗೆ ಮತ್ತು ಸಿಬ್ಬಂದಿ ನೇಮಿಸಬಹುದು ಎಂಬುದರ ಬಗ್ಗೆ ವರದಿ ತಯಾರಿಸಿ ಮೇಲಧಿಕಾರಿಗಳಿಗೆ ಕಳುಹಿಸಲಾಗುವುದು ಎಂದರು.

ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ನಾಗೇಂದ್ರ, ಹಿರಿಯ ಆರೋಗ್ಯ ನಿರೀಕ್ಷಕ ಕೆ.ವಿ.ರಮೇಶ್, ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net