ಕೆ.ಆರ್.ನಗರ: ತನ್ನ ವಿರುದ್ಧ ಅಪಪ್ರಚಾರ ಮಾಡುತ್ತಾ, ಮಾನಸಿಕ ಕಿರುಕುಳ ನೀಡುತ್ತಿರುವವರ ಮೇಲೆ ಕ್ರಮಕ್ಕೆ ಒತ್ತಾಯಿಸಿ ವೈದ್ಯರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ಕೆ.ಆರ್.ಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಪಟ್ಟಣದ ಕನಕನಗರ ಬಡಾವಣೆಯ ನಿವಾಸಿಯಾಗಿರುವ ಡಾ.ಶ್ರೀಕಾಂತ್ ದೂರು ನೀಡಿದವರು.
ನನಗೆ ಕರೊನಾ ಸೋಂಕು ತಗುಲಿರುವುದಾಗಿ ವದಂತಿ ಹರಡುತ್ತಿರುವ ಕೆಲವರು, ನನ್ನ ಬಳಿ ಚಿಕಿತ್ಸೆಗೆ ಹೋಗದಂತೆ ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಆದ್ದರಿಂದ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಅವರು ಪಿಎಸ್‌ಐ ವಿ.ಚೇತನ್ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.
ಕೆ.ಆರ್.ಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾನು ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜೂ. 1ರಂದು ಕೋವಿಡ್-19ರ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಆದರೆ, ಜೂ. 4ರಂದು ಅದರ ವರದಿ ನೆಗೆಟಿವ್ ಬಂದಿದೆ. ಆದ್ದರಿಂದ ಸಾರ್ವಜನಿಕರು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಡಾ.ಶ್ರೀಕಾಂತ್ ಸ್ಪಷ್ಟಪಡಿಸಿದ್ದಾರೆ.
ವೈದ್ಯರು ದೂರು ನೀಡುವ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ರುದ್ರೇಶ್ ಜತೆಗಿದ್ದರು.
ರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಪಟ್ಟಣದ ಕನಕನಗರ ಬಡಾವಣೆಯ ನಿವಾಸಿಯಾಗಿರುವ ಡಾ.ಶ್ರೀಕಾಂತ್ ದೂರು ನೀಡಿದವರು.
ನನಗೆ ಕರೊನಾ ಸೋಂಕು ತಗುಲಿರುವುದಾಗಿ ವದಂತಿ ಹರಡುತ್ತಿರುವ ಕೆಲವರು, ನನ್ನ ಬಳಿ ಚಿಕಿತ್ಸೆಗೆ ಹೋಗದಂತೆ ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಆದ್ದರಿಂದ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಅವರು ಪಿಎಸ್‌ಐ ವಿ.ಚೇತನ್ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.
ಕೆ.ಆರ್.ಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾನು ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜೂ. 1ರಂದು ಕೋವಿಡ್-19ರ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಆದರೆ, ಜೂ. 4ರಂದು ಅದರ ವರದಿ ನೆಗೆಟಿವ್ ಬಂದಿದೆ. ಆದ್ದರಿಂದ ಸಾರ್ವಜನಿಕರು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಡಾ.ಶ್ರೀಕಾಂತ್ ಸ್ಪಷ್ಟಪಡಿಸಿದ್ದಾರೆ. ವೈದ್ಯರು ದೂರು ನೀಡುವ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ರುದ್ರೇಶ್ ಜತೆಗಿದ್ದರು.