ಸಂಸದ ರಾಜಾ ಅಮರೇಶ್ವರ ನಾಯಕಗೆ ಕರೊನಾ ಪಾಸಿಟಿವ್​

RajaAmareshwaraNayaka
Published on

ರಾಯಚೂರು: ಬಿಜೆಪಿ ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ.

ಮೈ-ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಕರೊನಾ ಪರೀಕ್ಷೆಗೆ ಸಂಸದರು ಒಳಗಾಗಿದ್ದರು. ವರದಿಯಲ್ಲಿ ಕರೊನಾ ಪಾಸಿಟಿವ್​ ಎಂದು ಬಂದಿದೆ. ಸದ್ಯ ಬೆಂಗಳೂರಿನ ಪೊರ್ಟೀಸ್ ಆಸ್ಪತ್ರೆಯಲ್ಲಿ ಸಂಸದರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾದಗಿರಿ ಮೆಡಿಕಲ್ ಕಾಲೇಜು ಉದ್ಘಾಟನೆ ಕಾರ್ಯಕ್ರಮ ಎರಡು ದಿನದ ಹಿಂದೆ ನಡೆದಿತ್ತು. ಆ ವೇಳೆ ಸಿಎಂ ಯಡಿಯೂರಪ್ಪ ಅವರೊಂದಿಗೆ ಸಂಸದ ರಾಜಾ ಅಮರೇಶ್ವರ ನಾಯಕ ಅವರು ವೇದಿಕೆ ಹಂಚಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರು ಮತ್ತು ಮುಖಂಡರಲ್ಲಿ ಸೋಂಕಿನ ಭೀತಿ ಆವರಿಸಿದೆ. ನಾಲ್ಕು ದಿನಗಳ ಹಿಂದೆ ನಗರದ ಜಿಪಂ ಸಭಾಂಗಣದಲ್ಲಿ ದಿಶಾ ಸಭೆಯಲ್ಲೂ ಸಂಸದರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net