ಬೆಂಗಳೂರು:
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ತ್ಯಾಗರಾಜ ನಗರ ಖಾಸಗಿ ಶಾಲೆ ಮುಖ್ಯಸ್ಥರಾದ ಗುರಪ್ಪ ನಾಯ್ಡು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
ಗುರಪ್ಪ ನಾಯ್ಡು ಅವರ ಮೇಲೆ ಲೈಂಗಿಕ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಅವರು ಈ ಕ್ರಮ ಕೈಗೊಂಡಿದ್ದಾರೆ.
ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡ ಆರ್.ಅಶೋಕ್ ಅವರು ವಿರುದ್ದ ಸ್ಪರ್ಧಿಸಿದ್ದ ಗುರಪ್ಪ ನಾಯ್ಡು ಅವರು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು. ಶಿಕ್ಷಕಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿತ್ತು.