ಬಿಜೆಪಿ ನಾಯಕರು ಕಳ್ಳರಿಗೆ-ಸುಳ್ಳರಿಗೆ ಬೆಂಬಲ ಕೊಡುವಂತ ಹೇಳಿಕೆ ನೀಡುತ್ತಿರುವುದು ದುರದೃಷ್ಟಕರ: ಈಶ್ವರ್ ಖಂಡ್ರೆ

pic khandre
Published on

ಬೀದರ್: ಮೈಸೂರಿನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬಿಜೆಪಿ ನಾಯಕರ ವಿರುದ್ದ ಹರಿಹಾಯ್ದಿದ್ದಾರೆ.

ಬೀದರ್​​ನಲ್ಲಿ ಮಾತನಾಡಿದ ಅವರು, ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಕಳ್ಳರಿಗೆ-ಸುಳ್ಳರಿಗೆ ಬೆಂಬಲ ಕೊಡುವಂತ ಹೇಳಿಕೆ ನೀಡುತ್ತಿರುವುದು ಅತ್ಯಂತ ದುರದೃಷ್ಟಕರ ವಿಚಾರ. ಬಿಜೆಪಿ ನಾಯಕರು ಬೇಜವಬ್ದಾರಿ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರು ನೀವೆ ಆತ್ಮಾವಲೋಕನ ಮಾಡಿಕೊಳ್ಳಿ, ಇವರು ಪ್ರತಿಪಕ್ಷದಲ್ಲಿದ್ದಾಗ ಸಣ್ಣ ಪ್ರಕರಣವನ್ನು ದೊಡ್ಡದಾಗಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಯುವತಿ ಮೇಲೆ ದೌರ್ಜನ್ಯ ನಡೆದಾಗ ಈ ರೀತಿ ಹೇಳಿಕೆ ನೀಡುತ್ತಿರುವುದು ಖಂಡನೀಯ. ಬಿಜೆಪಿ ನಾಯಕರು ಆಡಳಿತದಲ್ಲಿ ಇರಲು ಯೋಗ್ಯರಲ್ಲ, ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net