

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವನೆ ನಿಮಿತ್ತ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ತನ್ನ ಅಬ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇನ್ನು ಐದನೇ ಪಟ್ಟಿಯಲ್ಲಿ ಕಾಂಗ್ರೆಸ್ ಅಚ್ಚರಿಯ ಅಭ್ಯರ್ಥಿಗಳನ್ನು ಘೋಷಿಸಿದ್ದು ನಿರೀಕ್ಷೆಯಂತೆ ಪುಲಕೇಶಿನಗರದ ಟಿಕೆಟ್ ಶಾಸಕ ಅಖಂಡ ಶ್ರೀನಿವಾಸ್ ಅವರ ಕೈ ತಪ್ಪಿದೆ.
ಇನ್ನು ಮಂಗಳವಾರ ಬಿಡುಗಡೆ ಮಾಡಿದ್ದ ಕಾಂಗ್ರೆಸ್ನ ನಾಲ್ಕನೇ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎದುರು ಯುಸೂಫ್ ಸವಣೂರ ಅವರನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಲಾಗಿತ್ತು.
ಇನ್ನು ಬುಧವಾರ ಬಿಡುಗಡೆಯಾಗಿರುವ ಐದನೇ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎದುರಿನ ಅಭ್ಯರ್ಥಿಯನ್ನು ಕಾಂಗ್ರೆಸ್ ಬದಲಿಸಿದ್ದು ಇದೀಗ ಉದ್ಯಮಿ, ಸವಣೂರಿನ ಯಾಸೀರ್ ಖಾನ್ ಪಠಾಣ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಇನ್ನು 2018ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಗಳಿಸಿದ್ದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಈ ಬಾರಿಯ ಟಿಕೆಟ್ ಕೈ ತಪ್ಪಿದೆ.
ಅಖಂಡ ಶ್ರೀನಿವಾಸ್ ಮುರ್ತಿ ಬದಲು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಎ.ಸಿ. ಶ್ರೀನಿವಾಸ್ ಅವರಿಗೆ ಪುಲಕೇಶಿನಗರ ಟಿಕೆಟ್ ಕೊಡಿಸುವಲ್ಲಿ ಕೆ.ಎಚ್. ಮುನಿಯಪ್ಪ ಯಶಸ್ವಿಯಾಗಿದ್ಧಾರೆ.