ಇನ್ನೂ ಖಾತೆ ಹಂಚಿಕೆಯಾಗಿಲ್ಲ, ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ನಕಲಿ ಪಟ್ಟಿ: ರಾಜ್ಯ ಕಾಂಗ್ರೆಸ್​

Fake news
Published on

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ನೂತನ ಸಚಿವರಾಗಿ ಶನಿವಾರ(ಮೇ 27)ರಂದು 24 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇನ್ನು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲ ಹೊತ್ತಿನಲ್ಲೇ ನೂತನವಾಗಿ ಸಂಪುಟ ಸೇರಿದವರಿಗೆ ನೀಡಲಾಗಿರುವ ಖಾತೆಗಳ ವಿವರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಿಯೊಂದು ವೈರಲ್​ ಆಗಿದೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ಫೋಟೋ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಕಾಂಗ್ರೆಸ್​ ಈ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜನತೆಯಲ್ಲಿ ಮನವಿ ಮಾಡಿದೆ.

Congress Tweet

ಈ ಕುರಿತು ಟ್ವೀಟ್​ ಮಾಡಿರುವ ರಾಜ್ಯ ಕಾಂಗ್ರೆಸ್​​ ಘಟಕ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ.

ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಸ್ಪಷ್ಟನೆಯನ್ನು ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net