ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು; ಬಿ.ವೈ. ವಿಜಯೇಂದ್ರಗೆ ಟೀಕಿಸಿ ಶುಭ ಕೋರಿದ ಕಾಂಗ್ರೆಸ್​

BYV
Published on

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ವಿಜಯೇಂದ್ರ ಅವರಿಗೆ ರಾಜ್ಯ ಕಾಂಗ್ರೆಸ್​ ಘಟಕ ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಮಡಿರುವ ರಾಜ್ಯ ಕಾಂಗ್ರೆಸ್​, ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ಟೀಕಿಸಿದೆ.

ಯಡಿಯೂರಪ್ಪನವರ ಮಗ ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಅವರಿಗೆ ಅಭಿನಂದನೆಗಳು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದೆ.

ಇತ್ತ ರಾಜ್ಯ ಕಾಂಗ್ರೆಸ್​ ಘಟಕದ ಟ್ವೀಟ್​ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದ್ದು, ದಶಕಗಳಿಂದ ಒಂದು ಕುಟುಂಬಕ್ಕೆ ಜೀತ ಮಾಡುತ್ತಿರುವ ಪಕ್ಷದ ರಾಜ್ಯ ಘಟಕವೊಂದು ಈ ಮಾತು ಆಡುತ್ತಿರುವುದನ್ನೂ ನಂಬಬೇಕು ಎಂದು ನೆಟ್ಟಿಗರು ತಿರುಗೇಟು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net